CISF Recruitment 2019: 300 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ

ಕೇಂದ್ರ ಸಶಸ್ತ್ರ ಭದ್ರತಾ ಪಡೆಗಳಲ್ಲಿ ಒಂದಾದ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನಲ್ಲಿ 300 ಹೆಡ್ ಕಾನ್‌ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಪುರುಷ / ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಕ್ರೀಡಾ ಕೋಟದಡಿ ನೇಮಕಾತಿ ಮಾಡಲಾಗುತ್ತಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

300 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಿಐಎಸ್‌ಎಫ್‌

CRITERIA DETAILS
Name Of The Posts ಹೆಡ್ ಕಾನ್‌ಸ್ಟೇಬಲ್
Organisation ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್
Educational Qualification ದ್ವಿತೀಯ ಪಿಯುಸಿ /10+2
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,500/- ರಿಂದ 81,100/-ರೂ
Application Start Date November 12, 2019
Application End Date December 17, 2019

ವಿದ್ಯಾರ್ಹತೆ:

ದ್ವಿತೀಯ ಪಿಯುಸಿ /10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಕ್ರೀಡೆಯಲ್ಲಿ ರಾಷ್ಟ್ರಮಟ್ಟ, ರಾಜ್ಯ ಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಮತ್ತು ಪ್ರಮಾಣ ಪತ್ರವನ್ನು ಹೊಂದಿರಬೇಕು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನ ಅಧಿಕೃತ ವೆಬ್‌ಸೈಟ್‌ https://www.cisfrectt.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 17,2019ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
CISF recruitment 2019 notification has been released on official website for the recruitment of 300 head constable (GD) posts. Interested candidates can apply through offline.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X