CISF Recruitment 2022 : 787 ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಅರ್ಜಿ ಆಹ್ವಾನ

ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 787 ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 21,2022 ರಿಂದ ಡಿಸೆಂಬರ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 787 ಹುದ್ದೆಗಳ ನೇಮಕಾತಿ

CISF ನೇಮಕಾತಿ 2022 ವಿದ್ಯಾರ್ಹತೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ 10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2022 ವಯೋಮಿತಿ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಗಸ್ಟ್ 1,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CISF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2022 ವೇತನ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CISF ನೇಮಕಾತಿ 2022 ಅರ್ಜಿ ಶುಲ್ಕ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಎಸ್‌ಬಿಐ ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

CISF ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.cisfrectt.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 21 ರಿಂದ ಡಿಸೆಂಬರ್ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Central industrial security force recruitment 2022 notification has been released for 787 Constable (tradesmen) posts. Interested candidates can apply before December 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+