ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ) 12 ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
ಐಟಿಐ, ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, ಗ್ರಾಜುಯೇಷನ್, ಎಂಬಿಎ, ಬಿ.ಇ/ಬಿ.ಟೆಕ್ ಮತ್ತು ಬಿಬಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಸಿಎಂಟಿಐ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 30,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ recruitment.cmti@nic.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಕ್ಟೋಬರ್ 23,2020ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.