ಸೆಂಟ್ರಲ್ ಮ್ಯಾನುಫಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ) 13 ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಐಟಿಐ, ಬಿ.ಇ/ಬಿ.ಟೆಕ್ ಮತ್ತು ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 32,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
CMTI recruitment 2021 notification has been released for 13 project fellow and project assistant posts. Interested candidates can apply before January 29.
Story first published: Friday, January 8, 2021, 22:19 [IST]


Click it and Unblock the Notifications











