Coal India Limited Recruitment 2022 : 1050 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲ್ ಇಂಡಿಯಾ ಲಿಮಿಟೆಡ್ 1050 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಜೂನ್ 23 ರಿಂದ ಜುಲೈ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ...ಜು.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ, ಬಿ.ಇ, ಬಿ.ಟೆಕ್, ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಮೇ 31,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ ೩ ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

 

ವೇತನದ ವಿವರ:

ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳು 1,180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.coalindia.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 23,2022 ರಿಂದ ಜುಲೈ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Coal india limited recruitment 2022 notification has been released for 1050 management trainee posts. Interested candidates can apply before July 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X