ಕಾಫಿ ಬೋರ್ಡ್ ಆಫ್ ಇಂಡಿಯಾ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಅಭ್ಯರ್ಥಿಗಳು ಕಾಫಿ ಬೋರ್ಡ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.indiacoffee.org/ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಮಾರ್ಚ್ 23,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ತಾಂತ್ರಿಕ ಸಹಾಯಕ |
| Organisation | ಕಾಫಿ ಬೋರ್ಡ್ ಆಫ್ ಇಂಡಿಯಾ |
| Educational Qualification | ಎಂ.ಎಸ್ಸಿ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 20,000/-ರೂ |
| Application Start Date | February 19, 2020 |
| Application End Date | March 23, 2020 |
ವಿದ್ಯಾರ್ಹತೆ:
ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಮಾರ್ಚ್ 23,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನದ ವಿವರ:
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಮಾರ್ಚ್ 23,2020ರಂದು ಬೆಳಿಗ್ಗೆ 10 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ:
ಕಾಫಿ ಕ್ವಾಲಿಟಿ ಡಿವಿಷನ್,
3ನೇ ಮಹಡಿ,
ಕಾಫಿ ಬೋರ್ಡ್,
#1, ಡಾ. ಬಿ.ಆರ್ ಅಂಬೇಡ್ಕರ್ ವೀದಿ,
ಬೆಂಗಳೂರು-560001
ಕರ್ನಾಟಕ, ಭಾರತ
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು


Click it and Unblock the Notifications











