ಕಾಫಿ ಬೋರ್ಡ್ ನೇಮಕಾತಿ ಕನ್ಸಲ್ಟೆಂಟ್ (ಪ್ರಮೋಷನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮೇ 31,2019 ರಂದು ಅರ್ಜಿ ಕಳುಹಿಸಲು ಕೊನೆಯ ದಿನವಾಗಿರುತ್ತದೆ.

| CRITERIA | DETAILS |
| Name Of The Posts | ಕನ್ಸಲ್ಟೆಂಟ್ (ಪ್ರಮೋಷನ್) |
| Organisation | ಕಾಫಿ ಬೋರ್ಡ್ |
| Educational Qualification | ಬಿಬಿಎ / ಎಂಬಿಎ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 1,00,000/-ರೂ |
| Application Start Date | May 17, 2019 |
| Application End Date | May 31, 2019 |
ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಬಿಎ ಅಥವಾ ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಕಾಫಿ ಬೋರ್ಡ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಕನ್ಸಲ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕಾಫಿ ಬೋರ್ಡ್ ನ ಅಧಿಕೃತ ವೆಬ್‌ಸೈಟ್ https://www.indiacoffee.org/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 31,2019 ರೊಳಗೆ ಅರ್ಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.
ಕಚೇರಿಯ ವಿಳಾಸ:
ಸೆಕ್ರೆಟರಿ,
ಕಾಫಿ ಬೋರ್ಡ್,ನಂ.1,
ಡಾ.ಬಿ.ಆರ್.ಅಂಬೇಡ್ಕರ್ ವೀದಿ,
ಬೆಂಗಳೂರು-560001
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ


Click it and Unblock the Notifications











