61 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..ಫೆ.29ರೊಳಗೆ ಅರ್ಜಿ ಹಾಕಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ 61 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 29,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

61 ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಪಶುವೈದ್ಯಾಧಿಕಾರಿ
Organisation ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
Educational Qualification ಬಿ.ವಿ.ಎಸ್.ಸಿ/ಬಿ.ವಿ.ಎಸ್‌.ಸಿ ಮತ್ತು ಎ.ಹೆಚ್‌ ಪದವಿ
Job Location ಕರ್ನಾಟಕ
Salary Scale ತಿಂಗಳಿಗೆ 52,650/- ರಿಂದ 97,100/-ರೂ
Application Start Date January 31, 2020
Application End Date February 29, 2020

ಶೈಕ್ಷಣಿಕ ವಿದ್ಯಾರ್ಹತೆ:

ದಿನಾಂಕ 29,2,2020ರೊಳಗಾಗಿ ಅಭ್ಯರ್ಥಿಯು ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ ಕಾನೂನು ಮೂಲಕ ಸ್ಥಾಪಿಸಲಾದ ಪಶು ವಿಶ್ವವಿದ್ಯಾಲಯದ ಅಥವಾ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಶೇ.50%ರಷ್ಟು ಅಂಕಗಳೊಂದಿಗೆ ಬಿ.ವಿ.ಎಸ್‌.ಸಿ ಅಥವಾ ಬಿ.ವಿ.ಎಸ್‌.ಸಿ ಮತ್ತು ಎ.ಹೆಚ್‌ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಫೆಬ್ರವರಿ 29,2020ರೊಳಗಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಯ ಅಭ್ಯರ್ಥಿಗಳು 520/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಅಭ್ಯರ್ಥಿಗಳು 270/-ರೂ ಅರ್ಜಿ ಶುಲ್ಕವನ್ನು ಮಾರ್ಚ್ 4,2020ರೊಳಗೆ ಕರ್ನಾಟಕ ರಾಜ್ಯದ ಯಾವುದೇ ಇ-ಅಂಚೆ ಕಛೇರಿಗಳಲ್ಲಿ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಈ ಹುದ್ದೆಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಆಯುಕ್ತಾಲಯ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.ahvs.kar.nic.in/kn-home.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 29,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Commissionerate of animal husbandry and veterinary services recruitment 2020 notification has been released on official website for the recruitment of 61 veterinary officer posts. Interested candidates can apply through online before 29th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+