ಕಾರ್ಪೋರೇಷನ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

ಮಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಈ ಬ್ಯಾಂಕ್ ಕಾನೂನು ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಒಟ್ಟು 20 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ರಾಜ್ಯದ ಕಾರ್ಪೋರೇಷನ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.

ಮಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಈ ಬ್ಯಾಂಕ್ ಕಾನೂನು ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಒಟ್ಟು 20 ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ

ಅಭ್ಯರ್ಥಿಗಳು ದೇಶದ ಯಾವುದೇ ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಕಾನೂನು ವಿಷಯದಲ್ಲಿ ಪದವಿ ಪಡೆದಿರಬೇಕು. ಬಾರ್ ಅಥವಾ ಜ್ಯುಡಿಷಿಯಲ್ ಸವೀರ್ಸ್ ಗೆ ಸಂಬಂಧಪಟ್ಟಂತೆ ಕನಿಷ್ಠ ಮೂರು ವರ್ಷಗಳ ಕಾಲ ಕೆಲಸ ಮಾಡಿರಬೇಕು. ಅಂದರೆ ಕೇಂದ್ರ/ರಾಜ್ಯ/ಶೆಡ್ಯೂಲ್ಡ್ ಕಮರ್ಷಿಯಲ್ ಅಥವಾ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಕಾನೂನು ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.

ಕಾರ್ಪೋರೇಷನ್ ಬ್ಯಾಂಕ್ ನೇಮಕಾತಿ

ಒಟ್ಟು 20 ಹುದ್ದೆಗಳು ಖಾಲಿ ಇದ್ದು. ಇವುಗಳಲ್ಲಿ ಎಸ್ ಸಿ ಅಭ್ಯರ್ಥಿಗಳಿಗೆ ಮೂರು ಹುದ್ದೆಗಳು, ಎಸ್ ಟಿ ವರ್ಗದವರಿಗೆ ಎರಡು ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಐದು ಹುದ್ದೆಗಳನ್ನು ಮೀಸಲಿಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆ ದಿನ: ಆಗಸ್ಟ್ 5, 2017

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ನಿಯಮಾನುಸಾರ ಎಸ್ ಸಿ/ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್ ಸಿ/ಎಸ್ ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಉಳಿದೆಲ್ಲಾ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್ ಲೈನ್ ನಲ್ಲಿಯೇ ಅರ್ಜಿ ಶುಲ್ಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ

ಮೊದಲಿಗೆ ಆನ್ ಲೈನ್ ನಲಿ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದವರನ್ನು ಗುಂಪು ಚರ್ಚೆ ಮತ್ತು ಸಂದರ್ಶನಕ್ಕೆ ಆಹ್ವಾನಿಸಿ, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಈ ಕುರಿತಾದ ಮಾಹಿತಿಯನ್ನು ಬ್ಯಾಂಕ್ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ.

ಪರೀಕ್ಷಾ ವಿಧಾನ

ಆನ್ ಲೈನ್ ಎಗ್ಸಾಮ್ ನಲ್ಲಿ ರೀಸನಿಂಗ್ ಇಂಗ್ಲಿಷ್ ಲಾಂಗ್ವೇಜ್ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಮತ್ತು ಪ್ರೊಫೆಷನಲ್ ನಾಲೇಜ್ಗೆ ಸಂಬಂಧಪಟ್ಟಂತೆ ತಲಾ 50 ಅಂಕಗಳಂತೆ 200 ಅಂಕಗಳ 200 ಪ್ರಶ್ನೆಗಳಿಗೆ ಅಭ್ಯರ್ಥಿಗಳು ಉತ್ತರಿಸಬೇಕಾಗುತ್ತದೆ. ಪರೀಕ್ಷೆ ಬರೆಯಲು ಅಭ್ಯರ್ಥಿಗಳಿಗೆ ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗೆ: www.corpbank.com

For Quick Alerts
ALLOW NOTIFICATIONS  
For Daily Alerts

English summary
Corporation Bank, a leading Public Sector Bank with Head Office in Mangalore and pan India presence with 2517branches, invites On-line applications for the post Manager (Law), from Indian Citizens
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X