CPCL Recruitment 2022 : 72 ಜ್ಯೂನಿಯರ್ ಇಂಜಿನಿಯರಿಂಗ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಒಟ್ಟು 72 ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ 72 ಹುದ್ದೆಗಳ ನೇಮಕಾತಿ

CPCL ನೇಮಕಾತಿ 2022 ವಿದ್ಯಾರ್ಹತೆ :

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಎಸ್ಸಿ, 10ನೇ ತರಗತಿ, ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ಸಂಸ್ಥೆಯಿಂದ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

 

CPCL ನೇಮಕಾತಿ 2022 ವಯೋಮಿತಿ :

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 26 ರಿಂದ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CPCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

CPCL ನೇಮಕಾತಿ 2022 ವೇತನ :

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25000/- ರಿಂದ 105000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

CPCL ನೇಮಕಾತಿ 2022 ಅರ್ಜಿ ಶುಲ್ಕ :

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

CPCL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cpcl.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್ 24,2022 ರಿಂದ ಏಪ್ರಿಲ್ 14,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
CPCL recruitment 2022 notification has been released for 72 junior engineering and junior technical assistant posts. Interested candidates can applyl before April 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X