CRIS Recruitment 2022 : 150 ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಒಟ್ಟು 150 ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಡಾಟಾ ಅನಾಲಿಸ್ಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 29,2022 ರಿಂದ ಮೇ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನಲ್ಲಿ 150 ಹುದ್ದೆಗಳ ನೇಮಕಾತಿ

CRIS ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ - 144 ಹುದ್ದೆಗಳು
ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ - 6 ಹುದ್ದೆಗಳು
ಒಟ್ಟು 150 ಹುದ್ದೆಗಳು

CRIS ನೇಮಕಾತಿ 2022 ವಿದ್ಯಾರ್ಹತೆ :

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನೇಮಕಾತಿಯ ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಎಸ್ಸಿ, ಬಿ.ಇ/ಬಿ.ಟೆಕ, ಎಂಸಿಎ, ಎಂ.ಇ/ಎಂ.ಟೆಕ್, ಎಂಎ, ಎಂಸಿಎ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

CRIS ನೇಮಕಾತಿ 2022 ವಯೋಮಿತಿ :

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನೇಮಕಾತಿಯ ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಮೇ ೨೪,೨೦೨೨ರ ಅನ್ವಯ ಕನಿಷ್ಟ 22 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನಲ್ಲಿ 150 ಹುದ್ದೆಗಳ ನೇಮಕಾತಿ

CRIS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನೇಮಕಾತಿಯ ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್-2022 ಸ್ಕೋರ್, ಮೆರಿಟ್ ಆಧಾರದ ಮೇಲೆ ಮತ್ತು ದೈಹಿಕ ಆರೋಗ್ಯದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

CRIS ನೇಮಕಾತಿ 2022 ವೇತನ :

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನೇಮಕಾತಿಯ ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/-ರೂ ವೇತನವನ್ನು ನೀಡಲಾಗುವುದು.

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನಲ್ಲಿ 150 ಹುದ್ದೆಗಳ ನೇಮಕಾತಿ

CRIS ನೇಮಕಾತಿ 2022 ಅರ್ಜಿ ಶುಲ್ಕ :

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನೇಮಕಾತಿಯ ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್/ಆಫ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

CRIS ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ ನೇಮಕಾತಿಯ ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://cris.org.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 25,2022 ರಿಂದ ಮೇ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CRIS recruitment 2022 notification has been released for 150 assistant software and data analyst posts. Interested candidates can apply before May 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X