CSB Recruitment 2022 : 66 ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ 66 ಸೈಂಟಿಸ್ಟ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 22,2022 ರಿಂದ ಆಗಸ್ಟ್ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗಾವಕಾಶ

CSB ನೇಮಕಾತಿ 2022 ವಿದ್ಯಾರ್ಹತೆ :

ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿಯ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

CSB ನೇಮಕಾತಿ 2022 ವಯೋಮಿತಿ :

ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿಯ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅಕ್ಟೋಬರ್ 31,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CSB ನೇಮಕಾತಿ 2022 ವೇತನ :

ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿಯ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗಾವಕಾಶ

CSB ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿಯ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CSB ನೇಮಕಾತಿ 2022 ಅರ್ಜಿ ಶುಲ್ಕ :

ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿಯ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

CSB ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿಯ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://csb.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 22 ರಿಂದ ಆಗಸ್ಟ್ 19,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
CSB recruitment 2022 notification has been released for 66 scientist-B posts. Interested candidates can apply before August 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X