CSL Recruitment 2022 : 136 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನಲ್ಲಿ 136 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಕೇರಳದಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 23,2022 ರಿಂದ ಮಾರ್ಚ್ 9,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸಿಎಸ್ಎಲ್ ನಲ್ಲಿ 136 ಹುದ್ದೆಗಳ ನೇಮಕಾತಿ

CSL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಗ್ರಾಜುಯೇಟ್ ಅಪ್ರೆಂಟಿಸ್ - 67 ಹುದ್ದೆಗಳು
ಡಿಪ್ಲೋಮಾ ಅಪ್ರೆಂಟಿಸ್ - 69 ಹುದ್ದೆಗಳು
ಒಟ್ಟು 136 ಹುದ್ದೆಗಳು

CSL ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

CSL ನೇಮಕಾತಿ 2022 ವಯೋಮಿತಿ :

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಅಭ್ಯರ್ಥಿಯು ಫೆಬ್ರವರಿ 23,2004ರ ಮುಂಚೆ ಜನಿಸಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CSL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CSL ನೇಮಕಾತಿ 2022 ವೇತನ :

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,200/- ರಿಂದ 12,000/-ರೂ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CSL ನೇಮಕಾತಿ 2022 ಅರ್ಜಿ ಶುಲ್ಕ :

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CSL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (ಸಿಎಸ್ಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cochinshipyard.in/career/career_locations/1 ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 23,2022 ರಿಂದ ಮಾರ್ಚ್ 9,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಸಿಎಸ್ಎಲ್ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Cochin shipyard limited (CSL) recruitment 2022 notification has been released for 136 graduate and diploma apprentice posts. Interested candidates can apply before March 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X