Dakshina Kannada District Court Recruitment 2021: 34 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 34 ಜವಾನ ಹುದ್ದೆಗಳ ನೇಮಕಾತಿ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ 34 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜವಾನ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ/ಪ.ಪಂ/ಪ್ರ-1ರ ಗರಿಷ್ಟ 40 ವರ್ಷ ಮತ್ತು ಪ್ರ-2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ, ಪ.ಪಂ, ಪ್ರ-1ರ ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://districts.ecourts.gov.in/dakshinakannada ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 25,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Dakshina kannada district court recruitment 2021 notification has been released for 34 peon posts. Interested candidates can apply through online before May 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X