ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದಲ್ಲಿ 48 ಕಿರಿಯ ಸಹಾಯಕ, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ಅಟೆಂಡರ್, ಮತ್ತು ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 2,2022 ರಿಂದ ಜೂನ್ 1,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
Davanagere DCC Bank ನೇಮಕಾತಿ 2022 ವಿದ್ಯಾರ್ಹತೆ :
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ಕಿರಿಯ ಸಹಾಯಕ, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ಅಟೆಂಡರ್, ಮತ್ತು ಡ್ರೈವರ್ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Davanagere DCC Bank ನೇಮಕಾತಿ 2022 ವಯೋಮಿತಿ :
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ಕಿರಿಯ ಸಹಾಯಕ, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ಅಟೆಂಡರ್, ಮತ್ತು ಡ್ರೈವರ್ ಹುದ್ದೆಗಳಿಗೆ ಜೂನ್ 1,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
Davanagere DCC Bank ನೇಮಕಾತಿ 2022 ವೇತನ :
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ಕಿರಿಯ ಸಹಾಯಕ, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ಅಟೆಂಡರ್, ಮತ್ತು ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂ ವರೆಗೆ ವೇತನವನ್ನು ನೀಡಲಾಗುವುದು.
Davanagere DCC Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ಕಿರಿಯ ಸಹಾಯಕ, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ಅಟೆಂಡರ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Davanagere DCC Bank ನೇಮಕಾತಿ 2022 ಅರ್ಜಿ ಶುಲ್ಕ :
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ಕಿರಿಯ ಸಹಾಯಕ, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ಅಟೆಂಡರ್ ಮತ್ತು ಡ್ರೈವರ್ ಹುದ್ದೆಗಳಿಗೆ 1000/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಧವಾ ಮಹಿಳೆಯರು 500/-ರೂ ಅನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಕ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕಿರುತ್ತದೆ.
Davanagere DCC Bank ನೇಮಕಾತಿ 2022 ಅರ್ಜಿ ಸಲ್ಲಿಕೆ :
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ಕಿರಿಯ ಸಹಾಯಕ, ಕಂಪ್ಯೂಟರ್ ಇಂಜಿನಿಯರ್, ಕಂಪ್ಯೂಟರ್ ಆಪರೇಟರ್, ಅಟೆಂಡರ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.ddccbank.co.in/ ಗೆ ಭೇಟಿ ನೀಡಿ. ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 2,2022 ರಿಂದ ಜೂನ್ 1,2022ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಯನ್ನು ಖುದ್ದಾಗಿ/ಅಂಚೆ/ಕೊರಿಯರ್ ಇತ್ಯಾದಿ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











