ದಾವಣಗೆರೆ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 18 ಗ್ರಾಮಲೆಕ್ಕಿಗ ಹುದ್ದೆಗಳ ನೇಮಕಾತಿ

ದಾವಣಗೆರೆ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 18 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

18 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ….ಫೆ.27ರೊಳಗೆ ಅರ್ಜಿ ಹಾಕಿ

 

CRITERIA DETAILS
Name Of The Posts ಗ್ರಾಮಲೆಕ್ಕಿಗ
Organisation ಜಿಲ್ಲಾ ಕಂದಾಯ ಘಟಕ
Educational Qualification 12ನೇ ತರಗತಿ / ದ್ವಿತೀಯ ಪಿಯುಸಿ
Job Location ದಾವಣಗೆರೆ ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 21,400/- ರಿಂದ 42,000/-ರೂ ವೇತನ
Application Start Date January 29, 2020
Application End Date February 27, 2020

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

ಫೆಬ್ರವರಿ 27,2020ರ ಅನ್ವಯ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಗರಿಷ್ಟ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್‌.ಇ ಅಥವಾ ಐ.ಸಿ.ಎಸ್‌.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

 

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಮಹಿಳೆ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅಂಚೆ ಕಛೇರಿಯಲ್ಲಿ ನಿಗಧಿತ ಅರ್ಜಿ ಶುಲ್ಕವನ್ನು ಪಾವತಿಸಲು ಫೆಬ್ರವರಿ 29,2020ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ದಾವಣಗೆರೆ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://davanagere.nic.in ಅಥವಾ http://davanagere-va.kar.nic.in ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Davanagere District revenue department recruitment 2020 notification has been released on official website for the recruitment of 18 village accountant posts. Interested candidates can apply through online before 27th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more