Davanagere University Recruitment 2022 : 10 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ 10 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 18,2022ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ :

ದಾವಣಗೆರೆ ವಿಶ್ವವಿದ್ಯಾಲಯ ನೇಮಕಾತಿಯ ಬೋಧಕೇತರ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :

ದಾವಣಗೆರೆ ವಿಶ್ವವಿದ್ಯಾಲಯ ನೇಮಕಾತಿಯ ಬೋಧಕೇತರ ಹುದ್ದೆಗಳಿಗೆ ಅಕ್ಟೋಬರ್ 18,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ :

ದಾವಣಗೆರೆ ವಿಶ್ವವಿದ್ಯಾಲಯ ನೇಮಕಾತಿಯ ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,350/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ದಾವಣಗೆರೆ ವಿಶ್ವವಿದ್ಯಾಲಯ ನೇಮಕಾತಿಯ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ದಾವಣಗೆರೆ ವಿಶ್ವವಿದ್ಯಾಲಯ ನೇಮಕಾತಿಯ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅಭ್ಯರ್ಥಿಗಳು 1000/-ರೂ ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ :

ದಾವಣಗೆರೆ ವಿಶ್ವವಿದ್ಯಾಲಯ ನೇಮಕಾತಿಯ ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://davangereuniversity.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 19,2022 ರಿಂದ ಅಕ್ಟೋಬರ್ 18,2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Davanagere university recruitment 2022 notification has been released for 10 non-teaching posts. Interested candidates can apply before October 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X