ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಮಾರ್ಗಸೂಚಿಯನುಗುಣವಾಗಿ ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ಯಾದಗಿರಿ ಕಛೇರಿಯನ್ನು ತಾತ್ಕಾಲಿಕವಾಗಿ ಪ್ರಾರಂಭಿಸಲಾಗಿದ್ದು, ನೂತವಾಗಿ ಪ್ರಾರಂಭವಾಗಿರುವ ಸದರಿ ಸಂಸ್ಥೆಯಲ್ಲಿ ಖಾಲಿ ಇರುವ 4 ರಕ್ಷಕರು, ಅಡುಗೆ ಸಹಾಯಕರು ಮತ್ತು ಸೇವಕರು/ಸ್ವೀಪರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ವಿದ್ಯಾರ್ಹತೆ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ನೇಮಕಾತಿಯ ರಕ್ಷಕರು, ಅಡುಗೆ ಸಹಾಯಕರು ಮತ್ತು ಸೇವಕರು/ಸ್ವೀಪರ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು 7ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ಕನ್ನಡ/ಇಂಗ್ಲೀಷ್ ನುಡಿ/ಬರಹ ಜ್ಞಾನ ಹೊಂದಿರಬೇಕು.
ವಯೋಮಿತಿ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ನೇಮಕಾತಿಯ ರಕ್ಷಕರು, ಅಡುಗೆ ಸಹಾಯಕರು ಮತ್ತು ಸೇವಕರು/ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 38 ವರ್ಷ ವಯೋಮಿತಿಯೊಳಗಿರಬೇಕು.
ವೇತನ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ನೇಮಕಾತಿಯ ರಕ್ಷಕರು, ಅಡುಗೆ ಸಹಾಯಕರು ಮತ್ತು ಸೇವಕರು/ಸ್ವೀಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6,000/- ರಿಂದ 7,500/-ರೂ ವೇತವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ನೇಮಕಾತಿಯ ರಕ್ಷಕರು, ಅಡುಗೆ ಸಹಾಯಕರು ಮತ್ತು ಸೇವಕರು/ಸ್ವೀಪರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ನೇಮಕಾತಿಯ ರಕ್ಷಕರು, ಅಡುಗೆ ಸಹಾಯಕರು ಮತ್ತು ಸೇವಕರು/ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 100/-ರೂಗಳ ಡಿ.ಡಿಯನ್ನು ಅರ್ಜಿ ಶುಲ್ಕವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ರವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ನೇಮಕಾತಿಯ ರಕ್ಷಕರು, ಅಡುಗೆ ಸಹಾಯಕರು ಮತ್ತು ಸೇವಕರು/ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://yadgir.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ, ನಂತರ ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 30,2021ರೊಳಗೆ ಅರ್ಜಿಯನ್ನು ಹಾಕಬಹುದು.
ಕಚೇರಿ ವಿಳಾಸ:
ಉಪ ನಿರ್ದೇಶಕರ ಕಛೇರಿ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ,
ಕೋಣೆ ಸಂಖ್ಯೆ : ಸಿ-17,
ಒಂದನೇ ಮಹಡಿ,
ಜಿಲ್ಲಾ ಆಡಳಿತ ಭವನ ಸಂಕೀರ್ಣ,
ಯಾದಗಿರಿ.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











