DEBEL Recruitment 2020: 22 ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಫೆನ್ಸ್ ಬಯೋ ಇಂಜಿನಿಯರಿಂಗ್ ಮತ್ತು ಇಲೆಕ್ಟ್ರೋ ಮೆಡಿಕಲ್ ಲ್ಯಾಬೋರೇಟರಿ (ಡಿಇಬಿಇಎಲ್) 22 ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಡಿಇಬಿಇಎಲ್ ನಲ್ಲಿ ಉದ್ಯೋಗಾವಕಾಶ....ಜ.2ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಗ್ರಾಜುಯೇಟ್ ಅಪ್ರೆಂಟಿಶಿಪ್ ಟ್ರೈನಿ - 18 ಹುದ್ದೆಗಳು
ಟೆಕ್ನೀಶಿಯನ್ ಅಪ್ರೆಂಟಿಶಿಪ್ ಟ್ರೈನಿ - 4 ಹುದ್ದೆಗಳು

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಟ್ರೈನಿ ಇಂಜಿನಿಯರ್ ಅಥವಾ ಟ್ರೈನಿ ಅಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಟ್ರೈನಿ ಇಂಜಿನಿಯರ್ ಅಥವಾ ಟ್ರೈನಿ ಅಧಿಕಾರಿ ಹುದ್ದೆಗಳಿಗೆ 200/-ರೂ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 2,2021ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
DEBEL recruitment 2020 notification has been released for 22 trainee posts. Interested candidates can apply before January 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+