ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ 126 ಹುದ್ದೆಗಳ ನೇಮಕಾತಿ

ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಒಟ್ಟು 126 ಎ ಗುಂಪಿನ ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 25ಕೊನೆಯ ದಿನವಾಗಿದೆ.

ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಹೈದರಾಬಾದ್-ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ ಪಶುವೈದ್ಯಾಧಿಕಾರಿಗಳ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ನ್ಯೂ ಇಂಡಿಯಾ ಅಷುರೆನ್ಸ್ ನಲ್ಲಿ 26 ಹುದ್ದೆಗಳ ನೇಮಕಾತಿನ್ಯೂ ಇಂಡಿಯಾ ಅಷುರೆನ್ಸ್ ನಲ್ಲಿ 26 ಹುದ್ದೆಗಳ ನೇಮಕಾತಿ

ಒಟ್ಟು 126 ಎ ಗುಂಪಿನ ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 25ಕೊನೆಯ ದಿನವಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಡೆಪ್ಯುಟಿ ಇಂಜಿನಿಯರ್ ಹುದ್ದೆಗಳ ನೇಮಕಾತಿಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಡೆಪ್ಯುಟಿ ಇಂಜಿನಿಯರ್ ಹುದ್ದೆಗಳ ನೇಮಕಾತಿ

ಪಶುವೈದ್ಯಾಧಿಕಾರಿಗಳ ನೇಮಕಾತಿ

ಹುದ್ದೆಗಳ ವಿವರ

ಹುದ್ದೆಯ ಹೆಸರು: ಪಶುವೈದ್ಯಾಧಿಕಾರಿ
ಹುದ್ದೆ ಸಂಖ್ಯೆ: 126
ವೇತನ ಶ್ರೇಣಿ: 28100-50100/-

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಹುದ್ದೆಗಳ ವರ್ಗೀಕರಣ ವಿವರ

ಪಶುವೈದ್ಯಾಧಿಕಾರಿಗಳ ನೇಮಕಾತಿ

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ: 25-01-2018 ರ ಒಳಗಾಗಿ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲಾದ ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿ.ವಿವ.ಎಸ್ಸಿ/ ಬಿ.ವಿ.ಎಸ್ಸಿ ಅಂಡ್ ಎ.ಹೆಚ್ ಪದವಿಯನ್ನು ಪಡದಿರಬೇಕು. ಹಾಗೂ ಅದೇ ದಿನಾಂಕದೊಳಗಾಗಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿ ಮಾಡಿಸಿರಬೇಕು.

ಆಯ್ಕೆ ವಿಧಾನ

ಆಯ್ಕೆಯನ್ನು ಬಿ.ವಿ.ಎಸ್ಸಿ/ಬಿ.ವಿ.ಎಸ್ಸಿ ಅಂಡ್ ಎ.ಹೆಚ್ ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡವಾರು ಅಂಕಗಳ/ಎಲ್ಲಾ ಸೆಮಿಸ್ಟರುಗಳ ಸರಾಸರಿ ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಮೀಸಲಾತಿಗನುಗುಣವಾಗಿ ನಡೆಸಲಾಗುವುದು.

ಅರ್ಜಿ ಸಲ್ಲಿಕೆ

ಅರ್ಜಿಯನ್ನು ವೆಬ್ಸೈಟ್ ಮೂಲಕ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಮತ್ತು ಶುಲ್ಕದ ಡಿ.ಡಿ ಲಗತ್ತಿಸಿ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/-
  • ಎಸ್.ಸಿ/ಎಸ್.ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಬೇಕಾದ ವಿಳಾಸ

ಜಂಟಿ ನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಸದಸ್ಯ ಕಾರ್ಯದರ್ಶಿಗಳು,
ಇಲಾಖಾ ಆಯ್ಕೆ ಸಮಿತಿ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ,
ಆಯುಕ್ತರವರ ಕಾರ್ಯಲಯ, 2ನೇ ಮಹಡಿ, ಸರ್.ಎಂ.ವಿಶ್ವೇಶರಯ್ಯಚಿಕ್ಕಗೋಪುರ,
ಡಾ.ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು-560001

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Department Of Animal Husbandry & Veterinary Service, Karnataka has released a recruitment notification for filling up Veterinary officer vacancies in the state. Interested and eligible candidates may apply through offline mode.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X