DFCCIL Recruitment 2021: 1074 ಜ್ಯೂ.ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಜ್ಯೂ.ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಎಫ್‌ಸಿಸಿಐಎಲ್ ನಲ್ಲಿ 1074 ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ (ಡಿಎಫ್‌ಸಿಸಿಐಎಲ್) ನಲ್ಲಿ 1074 ಜ್ಯೂನಿಯರ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಪದವಿ, ಎಂಬಿಎ/ಪಿಜಿಡಿಬಿಎ/ಪಿಜಿಡಿಬಿಎಂ/ಪಿಜಿಡಿಎಂ, ಡಿಪ್ಲೋಮಾ, ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸ್ಡ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ 1,000/-ರೂ, ಎಕ್ಸಿಕ್ಯುಟಿವ್ ಹುದ್ದೆಗಳಿಗೆ 900/-ರೂ ಮತ್ತು ಜ್ಯೂ,ಎಕ್ಸಿಕ್ಯುಟಿವ್ ಹುದ್ದೆಗಳಿಗೆ 700/-ರೂ ಅರ್ಜಿ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕತ ವೆಬ್‌ಸೈಟ್ https://dfccil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 23,2021ರ ರಾತ್ರಿ 11:45ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


For Quick Alerts
ALLOW NOTIFICATIONS  
For Daily Alerts

English summary
DFCCIL recruitment 2021 notification has been released for 1074 junior manager, executive and junior executive posts. Interested candidates can apply online before May 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X