ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ, ಬೆಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ಚಾನಿಸಲಾಗಿದೆ.
ಒಟ್ಟು 46 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಇತರೇ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಂಡು ಸೆಪ್ಟೆಂಬರ್ 07ರೊಳಗೆ ಆನ್ ಲೈನ್ ನಲ್ಲಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ
ಶೀಘ್ರಲಿಪಿಗಾರ ಹುದ್ದೆಗಳ ಸಂಖ್ಯೆಃ 17
ವೇತನ ಶ್ರೇಣಿ: ರೂ.14550-26700/-
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.
ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಟೈಪಿಸ್ಟ್ : 16
ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.
ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ್ ಗ್ರೇಡ್) ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಟೈಪಿಸ್ಟ್ -ಕಾಪಿಸ್ಟ್ : 13
ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕಡೆಯ ದಿನಾಂಕದ ಒಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.
ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ (ಜೂನಿಯರ್ ಗ್ರೇಡ್) ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿದರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಅರ್ಜಿ ಶುಲ್ಕ
- ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: ರೂ.200/-
- ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
ಆಯ್ಕೆ ವಿಧಾನ
ಮೇಲೆ ಹೇಳಿದ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು 45 ನಿಮಿಷಗಳಲ್ಲಿ ತರ್ಜುಮೆ ಮಾಡಿ ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆ ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಧಾರವಾಡ www.ecourts.gov.in ರಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸತಕ್ಕದ್ದು.
ವಯೋಮಿತಿ
ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ ವಯೋಮಿತಿ 35.
ಸಾಮಾನ್ಯ ವರ್ಗ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
ಪ.ಜಾ, ಪ.ಪಂ, ಪ್ರ-1 : 40 ವರ್ಷ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07/09/2017, ರಾತ್ರಿ 11.59 ರವರೆಗೂ
ಶುಲ್ಕ ಪಾವತಿ ಕೊನೆ ದಿನಾಂಕ : 08/09/2017.
ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ


Click it and Unblock the Notifications











