ಧಾರವಾಡ ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 9 ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ಧಾರವಾಡ ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 9 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 30,2019ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಧಾರವಾಡ  ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಧಾರವಾಡ ಜಿಲ್ಲೆ (ಕರ್ನಾಟಕ)
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ
Application Start Date October 1, 2019
Application End Date October 30, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿರಬೇಕು.

ಗಣಕ ಯಂತ್ರದಲ್ಲಿ ಬೆರಳಚ್ಚು ಮಾಡುವ ಜ್ಞಾನವು ಅವಶ್ಯವಾಗಿರುತ್ತದೆ.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ ವಯೋಮಿತಿಯ ವಿವರ ಇಂತಿವೆ:

ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
ಪ್ರವರ್ಗ 2ಎ,2ಬಿ,3ಎ,3ಬಿ: 38ವರ್ಷ

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.

ಆಯ್ಕೆಯ ವಿಧಾನ:

ಪ್ರತಿ ಅರ್ಹತಾ ಪರೀಕ್ಷೆಯು ಗರಿಷ್ಟ 100 ಅಂಕಗಳಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು. ಮತ್ತು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ಒಂದು ನಿಮಿಷಕ್ಕೆ 260 ಅಕ್ಷರಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ/ ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರ ಮಾಡಬೇಕು.

ಅಭ್ಯರ್ಥಿಗಳಿಗೆ ಆಂಗ್ಲ ಭಾಷೆಯಲ್ಲಿ ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನ ನೀಡಿ ಅದನ್ನು ಬೆರಳಚ್ಚು ಯಂತ್ರದ / ಕಂಪ್ಯೂಟರ್ ಮೂಲಕ 45 ನಿಮಿಷಗಳಲ್ಲಿ ಲಿಪ್ಯಂತರ ಮಾಡಬೇಕು.

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://karnatakajudiciary.kar.nic.in/districtrecruitment.asp ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 30,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of dharwad has invited application for the post of 9 stenographers. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+