ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 22 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿಯಿಂದ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 4,2019ರ ಸಂಜೆ 5:30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಗ್ರಾಮಲೆಕ್ಕಿಗ |
| Organisation | ಕಂದಾಯ ಇಲಾಖೆ |
| Educational Qualification | 12ನೇ ತರಗತಿ / ದ್ವಿತೀಯ ಪಿಯುಸಿ |
| Job Location | ಧಾರವಾಡ ಜಿಲ್ಲೆ (ಕರ್ನಾಟಕ) |
| Salary Scale | 21,400/- ರಿಂದ 42,000/-ರೂ ವೇತನ |
| Application Start Date | August 5, 2019 |
| Application End Date | September 4, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ
ಮಾಡಲಾಗುವುದು.
ಅರ್ಜಿ ಶುಲ್ಕ:
ಪರಿಶಿಷ್ಠ ಜಾತಿ/ ಪರಿಶಿಷ್ಟ ಪಂಗಡ/ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ 100/-ರೂ ಮತ್ತು ಸಾಮಾನ್ಯ ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ /ಡೆಬಿಟ್ ಕಾರ್ಡ್ /ಕ್ರೆಡಿಟ್ ಕಾರ್ಡ್ / ಚಲನ್ ಇತ್ಯಾದಿಗಳ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಆನ್‌ಲೈನ್ ಮೂಲಕ ಸೆಪ್ಟೆಂಬರ್ 5,2019 ರೊಳಗೆ ಪಾವತಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಧಾರವಾಡ ಜಿಲ್ಲೆಯ ಅಧಿಕೃತ ವೆಬ್‌ಸೈಟ್ http://dharwad-va.kar.nic.in ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ನಂತರ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 4,2019 ರ ಸಂಜೆ 5:30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ
ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ


Click it and Unblock the Notifications











