
ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಚೇರಿಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ 14 ಅಧಿಕಾರಿ, ಸಂಯೋಜಕರು, ಡಾಟಾ ಎಂಟ್ರಿ ಆಪರೇಟರ್ಸ್ ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್/ಎಂಬಿಎ, ಪೋಸ್ಟ್ ಗ್ರಾಜುಯೇಶನ್, ಬಿಸಿಎ/ಬಿ.ಎಸ್ಸಿ, ದ್ವಿತೀಯ ಪಿಯುಸಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 16,000/- ರಿಂದ 38,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ, ಮೆರಿಟ್ ಆಧಾರ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://zpdharwad.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 18,2021ರ ಸಂಜೆ 5:30ರೊಳಗೆ ಅರ್ಜಿಯನ್ನು
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











