Dharwad Zilla Panchayat Recruitment 2022 : ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ಕಾರ್ಯಾಲಯ, ಧಾರವಾಡದಲ್ಲಿ 6 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಮೇಲ್ವಿಚಾರಣೆಗಾಗಿ ತಾಲೂಕು ಪಂಚಾಯಿತಿಗಳು ಪ್ರಮುಖ ಪಾತ್ರ ಹೊಂದಿದ್ದು, ತಾಲೂಕು ಪಂಚಾಯಿತಿಗಳಿಗೆ ಮಂಜೂರಾದ ಬಹಳಷ್ಟು ಹುದ್ದೆಗಳು ಖಾಲಿ ಇರುವುದರಿಂದ ಯೋಜನೆಯ ಮೇಲ್ವಿಚಾರಣೆಗೆ ಅಡಚಣೆ ಉಂಟಾಗಿರುತ್ತದೆ. ನರೇಗಾ ಯೋಜನೆಯ ಅನುಷ್ಠಾನಕ್ಕೆ ವಿವಿಧ ಹಂತದ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 1 ಲಕ್ಷಕ್ಕಿಂತ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿದ ಅಣ್ಣಿಗೇರಿ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಮತ್ತು ನವಲಗುಂದ ತಾಲೂಕು ಪಂಚಾಯಿತಿಗಳಿಗೆ ತಲಾ ಒಬ್ಬರಂತೆ ನೇಮಕಾತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 7,022 ರಿಂದ ಜನವರಿ 17,2022ರೊಳಗೆ ಅರ್ಜಿಯನ್ನು ಹಾಕಬಹುದು.

Dharwad Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಧಾರವಾಡ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಬಿ.ಕಾಂ ಪದವಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಟೈಪಿಂಗ್ ಪರಿಣಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Dharwad Zilla Panchayat ನೇಮಕಾತಿ 2022 ವಯೋಮಿತಿ :

ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಧಾರವಾಡ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Dharwad Zilla Panchayat ನೇಮಕಾತಿ 2022 ಆಯ್ಕೆ ವಿಧಾನ :

ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಧಾರವಾಡ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಸೇವೆ ಪಡೆಯಲು ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರಿಸಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳು ಮೇಲೆ ತಿಳಿಸಿದ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವುದನ್ನು ಪ್ರಾಯೋಗಿಕ ಪರೀಕ್ಷೆ ಮೂಲಕ ಖಚಿತಪಡಿಸಿಕೊಂಡು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಸೇವೆಗೆ ಆಯ್ಕೆ ಮಾಡಲಾಗುವುದು.

Dharwad Zilla Panchayat ನೇಮಕಾತಿ 2022 ವೇತನ :

ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಧಾರವಾಡ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಕಾರ್ಮಿಕ ಇಲಾಖೆಯು ತಾಲೂಕು ಮಟ್ಟದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ಮಾಸಿಕ ಸಂಭಾವನೆಯನ್ನು ನೀಡಲಾಗುವುದು.

Dharwad Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಧಾರವಾಡ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://dharwad.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 7,2022 ರಿಂದ ಜನವರಿ 17,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Dharwad zilla panchayat recruitment 2022 notification has been released for 6 administrative assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+