
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರಿನಲ್ಲಿ ಪ್ರೊಕ್ಯುರ್ಮೆಂಟ್ ಸಮಾಲೋಚಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಬಹುದು.
ವಿದ್ಯಾರ್ಹತೆ:
ಎಂಬಿಎ, ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಆಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ:
ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ:
ಪ್ರೊಕ್ಯುರ್ಮೆಂಟ್ ಸಮಾಲೋಚಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 55,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನ ವಿವರ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯಲ್ಲಿ ಮೇ 31,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
National Health Mission,
Directorate Of Health And Family Welfare,
1st Floor, West Wing,
Arogya Soudha,
Bengaluru.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











