DHFWS Recruitment 2020: ಕಿರಿಯ ಪುರುಷ ಆರೋಗ್ಯ ಸಹಾಯಕ ಹುದ್ದೆಗಳಿಗೆ ನೇರ ಸಂದರ್ಶನ

ಚಾಮರಾಜನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 2 ಕಿರಿಯ ಪುರುಷ ಆರೋಗ್ಯ ಸಹಾಯಕ (ಎನ್‌.ಯು.ಹೆಚ್.ಎಂ) ಹುದ್ದೆಗಳ ನೇಮಕಾತಿಗೆ ಜುಲೈ 23,2020ರಂದು ಬೆಳಿಗ್ಗೆ 11ಕ್ಕೆ ನೇರ ಸಂದರ್ಶನ ನಡೆಸಲಾಗುತ್ತಿದೆ.

ಚಾಮರಾಜನಗರದಲ್ಲಿ ಕಿರಿಯ ಪುರುಷ  ಆರೋಗ್ಯ ಸಹಾಯಕ ಹುದ್ದೆಗಳ ನೇಮಕಾತಿ

ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿತರನ್ನು ನಿಭಾಯಿಸಲು ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಹುದ್ದೆಗಳನ್ನು ತಾತ್ಕಾಲಿಕವಾಗಿ ಗರಿಷ್ಠ ಆರು ತಿಂಗಳ ಅವಧಿಗೆ ಅಥವಾ ನೇರ ನೇಮಕಾತಿಯಿಂದ ಹುದ್ದೆಗಳು ಭರ್ತಿಯಾಗುವವರೆಗೆ ಇವುಗಳಿಗೆ ಯಾವುದು ಮೊದಲೊ ಅಲ್ಲಿಯ ವರೆಗೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ರೋಸ್ಟರ್‌-ಕಂ-ಮೆರಿಟ್‌ ಅನ್ನು ಅನುಸರಿಸಿ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಸ್‌.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದೋದ್ದೇಶ ಮೂಲ ಆರೋಗ್ಯ ಆರೋಗ್ಯ ಕಾರ್ಯಕರ್ತರ ತರಬೇತಿ/ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ ಹೊಂದಿರಬೇಕು.

ವಯೋಮಿತಿ:

ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ, 3ಬಿ ವರ್ಗದ ಗರಿಷ್ಟ 38 ವರ್ಷ ಮತ್ತು ಎಸ್‌.ಟಿ/ಎಸ್.ಸಿ ವರ್ಗದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನ:

ಕಿರಿಯ ಪುರುಷ ಆರೋಗ್ಯ ಸಹಾಯಕ (ಎನ್‌.ಯು.ಹೆಚ್.ಎಂ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 23,2020ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಚಾಮರಾಜನಗರದಲ್ಲಿ ಕಿರಿಯ ಪುರುಷ  ಆರೋಗ್ಯ ಸಹಾಯಕ ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Chamarajanagar district health and family welfare department recruitment 2020 notification has been released for the recruitment of 2 posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+