DHFWS Karnataka Recruitment 2021 : ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ತಾಂತ್ರಿಕ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ

ವಿದ್ಯಾರ್ಹತೆ:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗೆ ಬಿಇ/ಬಿಟೆಕ್ ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವಾ ಐ.ಟಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಉತ್ತಮ ಟೈಪಿಂಗ್ ಜ್ಞಾನವಿರಬೇಕು. ಬಹುಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.

ವಯೋಮಿತಿ:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ವೇತನ:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗೆ ಅಭ್ಯರ್ಥಿಯನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗೆ ಸೇರಬಯಸುವ ಅಭ್ಯರ್ಥಿಯು ನವೆಂಬರ್ 19,2021ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ನಡೆಯುವ ದಸ್ತಾವೇಜು ಪರಿಶೀಲನೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4ರ ವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಸಂದರ್ಶನ ನಡೆಯುವ ಸ್ಥಳ:
ನಿರ್ದೇಶಕರು,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ,
ಆರೋಗ್ಯಸೌಧ,
1ನೇ ಅಡ್ಡರಸ್ತೆ,
ಮಾಗಡಿ ರಸ್ತೆ,
ಬೆಂಗಳೂರು-23.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್‌ಸೈಟ್ https://karunadu.karnataka.gov.in/Pages/karunadu.aspx ಗೆ ಭೇಟಿ ನೀಡಿ ಮತ್ತು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
DHFWS karnataka recruitment 2021 notification has been released for recruitment of technical assistant post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X