ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕ ಕೊಪ್ಪಳದಲ್ಲಿ ವಿವಿಧ ಕಾರ್ಯಕ್ರಮಗಳಡಿಯಲ್ಲಿ 22 ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಜನರಲ್ ಫಿಸಿಷಿಯನ್, ಎಪಿಡೊಮಾಲಜಿಸ್ಟ್ ಮತ್ತು ಯೋಗ ತರಬೇತುದಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:
ಎಂಬಿಬಿಎಸ್, ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ಹುದ್ದೆಗಳಿಗನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿ ವಿಳಾಸ:
ಜಿಲ್ಲಾ ಸರ್ವೇಕ್ಷಣಾ ಘಟಕ,
ಹಳೇ ಜಿಲ್ಲಾ ಆಸ್ಪತ್ರೆ ಅವರಣ,
ಕೊಪ್ಪಳ-583231.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











