DHFWS Recruitment 2020: ವಿವಿಧ 135 ಹುದ್ದೆಗಳ ನೇಮಕಾತಿ

ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 135 ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಮಂಡ್ಯದಲ್ಲಿ 135 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿತರನ್ನು ನಿಭಾಯಿಸಲು ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಹುದ್ದೆಗಳನ್ನು ತಾತ್ಕಾಲಿಕವಾಗಿ ಗರಿಷ್ಠ ಆರು ತಿಂಗಳ ಅವಧಿಗೆ ಅಥವಾ ನೇರ ನೇಮಕಾತಿಯಿಂದ ಹುದ್ದೆಗಳು ಭರ್ತಿಯಾಗುವವರೆಗೆ ಇವುಗಳಿಗೆ ಯಾವುದು ಮೊದಲೊ ಅಲ್ಲಿಯ ವರೆಗೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ರೋಸ್ಟರ್‌-ಕಂ-ಮೆರಿಟ್‌ ಅನ್ನು ಅನುಸರಿಸಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅಪ್ಲಿಕೇಶನ್‌ ಆಹ್ವಾನಿಸಿದೆ.

ಹುದ್ದೆಗಳ ವಿವರ:

ಶುಶ್ರೂಷಕರು: 82 ಹುದ್ದೆಗಳು
ಪ್ರಯೋಗಶಾಲಾ ತಂತ್ರಜ್ಞರು: 23 ಹುದ್ದೆಗಳು
ಫಾರ್ಮಸಿಸ್ಟ್‌: 30 ಹುದ್ದೆಗಳು
ಒಟ್ಟು 135 ಹುದ್ದೆಗಳು

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ಡಿಪ್ಲೊಮ / ಬಿಎಸ್ಸಿ ನರ್ಸಿಂಗ್, ಎಂ,ಎಸ್ಸಿ ನರ್ಸಿಂಗ್, ಪದವಿ ಪ್ರಯೋಗಶಾಲಾ ತಂತ್ರಜ್ಞರು-ಡಿ.ಎಂ.ಎಲ್.ಟಿ ಫಾರ್ಮಾಸಿಸ್ಟ್-ಡಿ.ಫಾರ್ಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಶುಶ್ರೂಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.25,000,/-ರೂ, ಪ್ರಯೋಗಶಾಲಾ ತಂತ್ರಜ್ಞರು ಮತ್ತು ಫಾರ್ಮಸಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಮತ್ತು ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿ ಅವಧಿಯಲ್ಲಿ ಪಡೆದು ಭರ್ತಿ ಮಾಡಿ ಶುಶ್ರೂಷಕರು ಹುದ್ದೆಗಳಿಗೆ ಜುಲೈ 23, ಪ್ರಯೋಗಶಾಲಾ ತಂತ್ರಜ್ಞರು ಹುದ್ದೆಗಳಿಗೆ ಜುಲೈ 24 ಮತ್ತು ಫಾರ್ಮಾಸಿಸ್ಟ್ ಹುದ್ದೆಗಳಿಗೆ ಜುಲೈ 27 ರಂದು ಅರ್ಜಿಯನ್ನು ಸಲ್ಲಿಸಿ ತಮ್ಮ ಹುದ್ದೆಗೆ ಸಂಬಂಧಪಟ್ಟ ಶೈಕ್ಷಣಿಕ ದಾಖಲಾತಿಗಳೊಂದಿಗೆ ಹಾಜರಾಗಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಮಂಡ್ಯದಲ್ಲಿ 135 ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Mandya health and family welfare department recruitment 2020 notification has been released for the recruitment of 135 various posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+