ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದಲ್ಲಿ ಖಾಲಿ ಇರುವ ಹಿರಿಯ ವೈದ್ಯಾಧಿಕಾರಿಗಳು,ಎಂ&ಇ ಸಹಾಯಕರು ಮತ್ತು ಶುಶ್ರೂಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಆಗಸ್ಟ್ 29,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಹಿರಿಯ ವೈದ್ಯಾಧಿಕಾರಿಗಳು,ಎಂ&ಇ ಸಹಾಯಕರು ಮತ್ತು ಶುಶ್ರೂಷಕರು |
| Organisation | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ |
| Educational Qualification | ಎಂಬಿಬಿಎಸ್, ಪದವಿ,ಬಿ.ಎಸ್ಸಿ ನರ್ಸಿಂಗ್ |
| Job Location | ಕಲಬುರ್ಗಿ (ಕರ್ನಾಟಕ) |
| Salary Scale | ಹಿರಿಯ ವೈದ್ಯಾಧಿಕಾರಿಗಳು -ತಿಂಗಳಿಗೆ 45,000/-ರೂ, ಎಂ&ಇ ಸಹಾಯಕರು- ತಿಂಗಳಿಗೆ 12,700/-ರೂ ಮತ್ತು ಶುಶ್ರೂಷಕರು - ತಿಂಗಳಿಗೆ 13,000/-ರೂ |
| Application Start Date | August 17, 2019 |
| Application End Date | August 29, 2019 |
ವಿದ್ಯಾರ್ಹತೆ:
ಎಂಬಿಬಿಎಸ್, ಪದವಿ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಹಿರಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಗರಿಷ್ಟ 65 ವರ್ಷ, ಎಂ&ಇ ಸಹಾಯಕರು ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಶುಶ್ರೂಷಕರು ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹಿರಿಯ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ, ಎಂ&ಇ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,700/-ರೂ ಮತ್ತು ಶುಶ್ರೂಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್, ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಆಗಸ್ಟ್ 29,2019ರ ಸಂಜೆ 5:30ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕಚೇರಿಯ ವಿಳಾಸ:
ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು,
ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ,
ಕಲಬುರಗಿ.
ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ
ಮತ್ತು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ



Click it and Unblock the Notifications











