DHFWS Recruitment 2020: 48 ಶುಶ್ರೂಷಕಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೊಪ್ಪಳ ಜಿಲ್ಲೆಯಲ್ಲಿ 48 ಶುಶ್ರೂಷಕಿ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ..ಡಿ.8ರೊಳಗೆ ಅರ್ಜಿ ಹಾಕಿ

 

ವಿದ್ಯಾರ್ಹತೆ:

ಎಂಬಿಬಿಎಸ್, ಎಂಡಿ, ಡಿಸಿಹೆಚ್, ಡಿಎನ್‌ಬಿ, ಡಿಪ್ಲೋಮಾ, ಬಿ.ಎಸ್ಸಿ, ಜಿಎನ್ಎಂ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಎಂಬಿಎ, ಬಿ.ಎಸ್ಸಿ, ಜಿಎನ್ಎಂ, ಎಂಎಸ್‌ಡಬ್ಲ್ಯೂ, ಎಂ,ಎ, 10+2 ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 15,000/- ರಿಂದ 1,30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ ಕೊಪ್ಪಳದಲ್ಲಿ ಪಡೆದುಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಡಿಸೆಂಬರ್ 8,2020ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಚೇರಿ,

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ,

ಜಿಲ್ಲಾ ಆಡಳಿತ ಭವನ,

ಹೊಸಪೇಟೆ ರಸ್ತೆ,

ಕೊಪ್ಪಳ-583231.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ..ಡಿ.8ರೊಳಗೆ ಅರ್ಜಿ ಹಾಕಿ

 
For Quick Alerts
ALLOW NOTIFICATIONS  
For Daily Alerts

English summary
DHFWS recruitment 2020 notification has been released for 48 nurses and various posts. Interested candidates can apply before December 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X