DHFWS Recruitment 2020: ಮ್ಯಾನೇಜರ್ ಮತ್ತು ಅಧಿಕಾರಿ ಹುದ್ದೆಗಳಿಗೆ ಡಿ.24ಕ್ಕೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ರಾಮನಗರ ಜಿಲ್ಲೆಯಲ್ಲಿ 2020-2021ನೇ ಸಾಲಿಗೆ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಅಡಿಯಲ್ಲಿ ಪ್ರೋಗ್ರಾಮರ್/ಆಪರೇಶನಲ್ ಮ್ಯಾನೇಜರ್, ಆಯುಷ್ ವೈದ್ಯಾಧಿಕಾರಿಗಳು ಮತ್ತು (ಟಿಬಿಹೆಚ್‌ವಿ) ವೈದ್ಯಕೀಯ ಮಹಾವಿದ್ಯಾಲಯ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ....ಡಿ.24ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಬಿಎಎಂಎಸ್, ಬಿಹೆಚ್‌ಎಂಎಸ್, ಬಿಎನ್‌ವೈಎಸ್, ಬಿಯುಎಂಎಸ್, ಎಂ.ಟೆಕ್, 10+2, ಪದವಿ, ಎಂಪಿಡಬ್ಲ್ಯೂ, ಎಲ್‌ಹೆಚ್‌ವಿ ಮತ್ತು ಎಎನ್‌ಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಪ್ರೋಗ್ರಾಮರ್/ಆಪರೇಶನಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ, ಆಯುಷ್ ವೈದ್ಯಾಧಿಕಾರಿಗಳು ಮತ್ತು ವೈದ್ಯಕೀಯ ಮಹಾವಿದ್ಯಾಲಯ (ಟಿಬಿಹೆಚ್‌ವಿ) ಹುದ್ದೆಗಳಿಗೆ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನ:

ಪ್ರೋಗ್ರಾಮರ್/ಆಪರೇಶನಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/-ರೂ, ಆಯುಷ್ ವೈದ್ಯಾಧಿಕಾರಿಗಳು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಮತ್ತು ವೈದ್ಯಕೀಯ ಮಹಾವಿದ್ಯಾಲಯ (ಟಿಬಿಹೆಚ್‌ವಿ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,850/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24,2020ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯೊಳಗೆ ನಿಗದಿತ ಅರ್ಜಿ ನಮೂನೆಯನ್ನು ಪಡೆದು ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ನೋಂದಣಿಯಾದ ಅಭ್ಯರ್ಥಿಗಳನ್ನು ಮಾತ್ರ ದಾಖಲಾತಿ ಪರಿಶೀಲನೆಗೆ ಪರಿಗಣಿಸಲಾಗುವುದು. ನೇರ ಸಂದರ್ಶನವನ್ನು ಸದರಿ ದಿನದಂದೇ ನಡೆಸಲಾಗುವುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ....ಡಿ.24ಕ್ಕೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
DHFWS recruitment 2020 notification has been released for manager and officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+