DHFWS Recruitment 2020: ವಿವಿಧ 79 ಹುದ್ದೆಗಳ ನೇಮಕಾತಿ

ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 79 ಶುಶ್ರೂಷಕಿಯರು, ಪ್ರಯೋಗಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಮತ್ತು ಗ್ರೂಪ್‌ 'ಡಿ' ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ವಿಜಯಪುರದಲ್ಲಿ 79 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿತರನ್ನು ನಿಭಾಯಿಸಲು ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಹುದ್ದೆಗಳನ್ನು ತಾತ್ಕಾಲಿಕವಾಗಿ ಗರಿಷ್ಠ ಆರು ತಿಂಗಳ ಅವಧಿಗೆ ಅಥವಾ ನೇರ ನೇಮಕಾತಿಯಿಂದ ಹುದ್ದೆಗಳು ಭರ್ತಿಯಾಗುವವರೆಗೆ ಇವುಗಳಿಗೆ ಯಾವುದು ಮೊದಲೊ ಅಲ್ಲಿಯ ವರೆಗೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ರೋಸ್ಟರ್‌-ಕಂ-ಮೆರಿಟ್‌ ಅನ್ನು ಅನುಸರಿಸಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅಪ್ಲಿಕೇಶನ್‌ ಆಹ್ವಾನಿಸಿದೆ.

ಹುದ್ದೆಗಳ ವಿವರ:

ಶುಶ್ರೂಷಕಿಯರು : 31 ಹುದ್ದೆಗಳು
ಕಿರಿಯ ಪ್ರಯೋಗಶಾಲಾ ತಂತ್ರಜ್ಞರು : 07 ಹುದ್ದೆಗಳು
ಫಾರ್ಮಸಿಸ್ಟ್‌ : 07 ಹುದ್ದೆಗಳು
ಗ್ರೂಪ್‌ 'ಡಿ: 40 ಹುದ್ದೆಗಳು
ಒಟ್ಟು 79 ಹುದ್ದೆಗಳು

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ಡಿಪ್ಲೊಮ / ಬಿಎಸ್ಸಿ ನರ್ಸಿಂಗ್, ಡಿಪ್ಲೊಮ ಇನ್‌ ಡಿಎಂಎಲ್‌ಟಿಸಿ, ಡಿಪ್ಲೊಮ ಇನ್‌ ಫಾರ್ಮಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಶುಶ್ರೂಷಕಿಯರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.25,000,/-ರೂ, ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಮತ್ತು ಫಾರ್ಮಸಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು. ಗ್ರೂಪ್‌ 'ಡಿ' ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 20,2020ರ ಸಂಜೆ 5 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ಶಾಖೆಗೆ ಸಲ್ಲಿಸಬೇಕು. ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ 22-07-2020 ರಂದು ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುತ್ತದೆ. ನಂತರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ.

ಅಧಿಕೃತ ವೆಬ್‌ಸೈಟ್: https://karunadu.karnataka.gov.in/hfw/Pages/Home.aspx

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ವಿಜಯಪುರದಲ್ಲಿ 79 ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
vijayapura health and family welfare department recruitment 2020 notification has been released for the recruitment of 79 various posts. Candidates can apply before July 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+