ಲೋಕಸಭೆಯಲ್ಲಿ 31 ಜ್ಯೂನಿಯರ್ ಕ್ಲರ್ಕ್ ನೇಮಕಾತಿ

Posted By:

ಲೋಕ ಸಭೆಯಲ್ಲಿ ಜ್ಯೂನಿಯರ್ ಕ್ಲರ್ಕ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 31 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಎಂಜಿನಿಯರಿಂಗ್ , ಸ್ನಾತಕ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ಹುದ್ದೆಯ ಹೆಸರು ಜ್ಯೂನಿಯರ್ ಕ್ಲರ್ಕ್

ವೇತನ ಶ್ರೇಣಿ: ರೂ.5200-20200/- (ಪಿಬಿ-1)+ ಗ್ರೇಡ್ ಪೇ ರೂ.2400/-

ವರ್ಗಹುದ್ದೆ ಸಂಖ್ಯೆ
ಎಸ್.ಸಿ01
ಎಸ್.ಟಿ05
ಒಬಿಸಿ09
ಸಾಮಾನ್ಯ16
ಒಟ್ಟು 31

ಅರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್, ಕಲೆ, ವಿಜ್ಞಾನ, ವಾಣಿಜ್ಯ, ಕಾನೂನು ಸೇರಿದಂತೆ ಯಾವುದಾದರೊಂದು ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಪ್ರತಿ ನಿಮಿಷಕ್ಕೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಕನಿಷ್ಠ 40 ಪದಗಳನ್ನು ಟೈಪ್ ಮಾಡುವ ಸಾಮರ್ಥ್ಯ ಹೊಂದಿರಬೇಕು. ಪದವಿ ಜೊತೆಗೆ ಎಐಸಿಟಿಇಯಿಂದ ಕಂಪ್ಯೂಟರ್ ಕೋರ್ಸ್ ಸರ್ಟಿಫಿಕೇಟ್ ಪಡೆದಿರತಕ್ಕದ್ದು.

ವಯೋಮಿತಿ

ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದ್ದು, ಸರ್ಕಾರಿ ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಲಿಖಿತ ಪರೀಕ್ಷೆಯು ಎರಡು ಹಂತದಲ್ಲಿದ್ದು, ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳು ಇರಲಿವೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನ, ಸಾಮಾನ್ಯ ಇಂಗ್ಲಿಷ್ ಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿರುತ್ತದೆ.

ಮುಖ್ಯ ಪರೀಕ್ಷೆಯು ಗ್ರಾಮರ್, ಪ್ರಬಂಧ, ಪತ್ರ ಲೇಖನ ಕುರಿತಾದ ಪ್ರಶ್ನೆಗಳನ್ನು ಹೊಂದಿದ್ದು ಇದರ ಜೊತೆಯಲ್ಲಿ ಹತ್ತು ನಿಮಿಷದ ಟೈಪಿಂಗ್ ಟೆಸ್ಟ್ ಕೂಡ ಇರಲಿದೆ.

ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಟೆಸ್ಟ್ ನಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಪರೀಕ್ಷಾ ಕೇಂದ್ರಗಳು

ಕೊಲ್ಕತ್ತಾ, ಚೆನ್ನೈ, ಮುಂಬೈ ಮತ್ತು ದೆಹಲಿ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೇರೆ ಯಾವುದೇ ರೀತಿ ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಇ-ಮೇಲ್ ಐಡಿ ಮತ್ತು ಫೋನ್ ನಂಬರ್ ಹೊಂದಿರತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-08-2017

ಹೆಚ್ಚಿನ ಮಾಹಿತಿಗಾಗಿ www.loksabha.nic.in ಗಮನಿಸಿ

English summary
Online applications are invited from eligible Indian citizens for filling up 31 vacancies for the post of Junior Clerk on Direct Recruitment basis in Lok Sabha Secretariat.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia