ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ನೇಮಕಾತಿ

ಕರ್ನಾಟಕ ವಿಧಾನ ಪರಿಷತ್ತಿನ ನಿಯಮಾವಳಿಗನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಅರ್ಜಿ ಸಲ್ಲಿಸತಕ್ಕದ್ದು.

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವರದಿಗಾರರು, ಕಿರಿಯ ಸಹಾಯಕರು, ಬೆರಳಚ್ಚುಗಾರರು, ವಾಹನ ಚಾಲಕರು ಮತ್ತು ಗ್ರೂಪ್ 'ಡಿ' ನೌಕರರ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

ಆಂಗ್ಲ ವರದಿಗಾರರು-04 ಹುದ್ದೆಗಳು

ವೇತನ ಶ್ರೇಣಿ: ರೂ.20000-36300/-

ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ನೇಮಕಾತಿ

ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲದಿಂದ ಪದವಿ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಆಂಗ್ಲ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ/ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಆಂಗ್ಲ ಶೀಘ್ರಲಿಪಿ ಪ್ರವೀಣದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಿಂದಿ ಶೀಘ್ರಲಿಪಿ ಪ್ರವೀಣ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು.

ಕನ್ನಡ ವರದಿಗಾರರು-04 ಹುದ್ದೆಗಳು

ವೇತನ ಶ್ರೇಣಿ: ರೂ.20000-36300/-

ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲದಿಂದ ಪದವಿ ಹೊಂದಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಕನ್ನಡ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ/ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಕನ್ನಡ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಹಿಂದಿ ಶೀಘ್ರಲಿಪಿ ಪ್ರವೀಣ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಆದ್ಯತೆ ನೀಡಲಾಗುವುದು.

ಕಿರಿಯ ಸಹಾಯಕರು-03 ಹುದ್ದೆ

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲದಿಂದ ಪದವಿ ಹೊಂದಿರಬೇಕು.

ಬೆರಳಚ್ಚುಗಾರರು-01 ಹುದ್ದೆ

ವೇತನ ಶ್ರೇಣಿ: ರೂ.11600-21000/-
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಮಾನ್ಯತೆ ಪಡೆದ ಸಂಸ್ಥೆಯಿಂದ ಒಂದು ವರ್ಷದ ಕಂಪ್ಯೂಟರ್ ಕೋರ್ಸನ್ನು ಮಾಡಿರುವ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವುದು.

ವಾಹನ ಚಾಲಕರು-01 ಹುದ್ದೆ

ವೇತನ ಶ್ರೇಣಿ: ರೂ.11600-21000/-

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮೋಟಾರು ಕಾರು/ಭಾರಿ ವಾಹನ ಚಾಲನಾ ಪರಿಣಿತಿಯನ್ನು ಹೊಂದಿರಬೇಕು ವಾಹನ ಚಾಲನಾ ಪರಿಣಿತಿಯ ಬಗ್ಗೆ ಕನಿಷ್ಠ ಪಕ್ಷ 03 ವರ್ಷಗಳ ಅನುಭವ ಹೊಂದಿರಬೇಕು. ಪ್ರಥಮ ಚಿಕಿತ್ಸಾ ಪ್ರಮಾಣ ಪತ್ರವನ್ನು ಹೊಂದಿರಬೇಕು

ಗ್ರೂಪ್ 'ಡಿ' -05 ಹುದ್ದೆಗಳು

ವೇತನ ಶ್ರೇಣಿ: ರೂ.9600-14550/-
ವಿದ್ಯಾರ್ಹತೆ: 7 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಕನಿಷ್ಠ ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ: ಸಾಮಾನ್ಯ ವರ್ಗ :35ವರ್ಷ,
ಪ್ರವರ್ಗ-2 ಎ, 2 ಬಿ, 3 ಎ, 3 ಬಿ: 35 ವರ್ಷ
ಪ.ಜಾ/ಪ.ಪಂ/ ಪ್ರವರ್ಗ-1: 40 ವರ್ಷ,

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-06-2017

ಅರ್ಜಿ ಸಲ್ಲಿಸಬೇಕಾದ ವಿಳಾಸ

ಕಾರ್ಯದರ್ಶಿ,
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ: 5079,
ಮೊದಲನೇ ಮಹಡಿ, ವಿಧಾನ ಸೌಧ,
ಬೆಂಗಳೂರು-560001

ಕರ್ನಾಟಕ ವಿಧಾನ ಪರಿಷತ್ತಿನ ನಿಯಮಾವಳಿಗನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ

  • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.
  • ಆಂಗ್ಲ ವರದಿಗಾರರು, ವಾಹನ ಚಾಲಕರು ಮತ್ತು ಗ್ರೂಪ್ 'ಡಿ' ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಾಮಾನ್ಯ ಅಭ್ಯರ್ಥಿಗಳು ರೂ.300/- ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ.150/-

ಡಿ.ಡಿ. ಅಥವಾ ಪೇ ಆರ್ಡರ್ ಅನ್ನು ಈ ಅಧಿಸೂಚನೆಯನ್ನು ಹೊರಡಿಸಿದ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ ಕಾರ್ಯದರ್ಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ ಅಂಚೆ ಪೆಟ್ಟಿಗೆ ಸಂಖ್ಯೆ :5079, ವಿಧಾನ ಸೌಧ, ಬೆಂಗಳೂರು-560001. ಈ ವಿಳಾಸಕ್ಕೆ ಪಾವತಿ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Direct Recruitment of reporters, assistants, stenographers and group d in klcs vidhana soudha. candidates can apply before june 12
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X