ಬಳ್ಳಾರಿ ಜಿಲ್ಲಾ ನ್ಯಾಯಾಲಯ: ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಜನವರಿ 5,2019 ರಿಂದ ಫೆಬ್ರವರಿ 5,2019 ರೊಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವೇತನ, ವರ್ಗೀಕರಣ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ:

CRITERIA DETAILS
Name Of The Posts ಶೀಘ್ರಲಿಪಿಗಾರರು (Stenographers)
Organisation ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ
Educational Qualification SSLC/ ತತ್ಸಮಾನ ಪರೀಕ್ಷೆ ಮತ್ತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ
Job Location ಬಳ್ಳಾರಿ
Salary Scale 27,650/- ರಿಂದ 52,650/-ರೂಗಳ ವರೆಗೆ ಹಾಗೂ ಇನ್ನಿತರೆ ಭತ್ಯೆಗಳು
Application Start Date January 5, 2019
Application End Date February 5, 2019

ಹುದ್ದೆಗಳ ವರ್ಗೀಕರಣ:

ವರ್ಗೀಕರಣಮಹಿಳೆಅಂ.ಅಇತರೆಒಟ್ಟು
ಪರಿಶಿಷ್ಟ ಜಾತಿ01-0102
ಪರಿಶಿಷ್ಟ ಪಂಗಡ--01 01
ಪ್ರವರ್ಗ-1--0101
ಸಾಮಾನ್ಯ ವರ್ಗ0101-02
ಒಟ್ಟು02010306

ವಿಶೇ‍ಷ ಸೂಚನೆ: ಅಂ.ಅ = ಅಂಗವಿಕಲ ಅಭ್ಯರ್ಥಿ

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಎಸ್ .ಎಸ್ .ಎಲ್ .ಸಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ಆಯ್ಕೆಯ ವಿಧಾನ:

ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ "ಸಾಮರ್ಥ್ಯ ಪರೀಕ್ಷೆ" ಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಾಮರ್ಥ್ಯ ಪರೀಕ್ಷೆಯಲ್ಲಿ ಬೆರಳಚ್ಚುಯಂತ್ರ ಅಥವಾ ಗಣಕಯಂತ್ರಗಳ ಮೇಲೆ ಬೆರಳಚ್ಚು ಮಾಡಬೇಕಾಗುತ್ತದೆ.

ವಯೋಮಿತಿ:

* ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ -18 ವ‍ರ್ಷ ವಯಸ್ಸನ್ನು ಪೂರೈಸಿರತಕ್ಕದ್ದು,

ಗರಿಷ್ಠ ವಯೋಮಿತಿ:

ಸಾಮಾನ್ಯ ವರ್ಗ:35ವರ್ಷಗಳು
2A, 2B, 3A ಮತ್ತು 3B :
38ವರ್ಷಗಳು
ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ: ಪ್ರವರ್ಗ -1:40ವರ್ಷಗಳು

ಮಾಜಿ ಸೈನಿಕರಿಗೆ ಗರಿಷ್ಟ ವಯೋಮಿತಿ ಅವರ ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವರೋ ಅಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳ ಸಡಿಲಿಕೆ ಮತ್ತು ವಿಧವೆಯವರಿಗೆ ಮತ್ತು ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ.

ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ಎಷ್ಟು ವ‍ರ್ಷ ಸೇವೆ ಸಲ್ಲಿಸಿರುವರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳು, ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆ.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸಿವಿಲ್ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ ಎರಡು ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಹಾಗೂ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾಗಿರುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಪರಿವೀಕ್ಷಣಾ ಅವಧಿಯೊಳಗೆ ಸರ್ಕಾರವು ಅನುಮೋದಿಸಿದ ಏಜೆನ್ಸಿಯು ನಡೆಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಪಾವತಿಸಬೇಕಾದ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ವರ್ಗ, ಪ್ರವರ್ಗ- 2A,2B, 3Aಮತ್ತು 3Bಗೆ ಸೇರಿದ ಅಭ್ಯರ್ಥಿಗಳುರೂ.250/-
ಪರಿಶಿಷ್ಟ ಜಾತಿ: ಪರಿಶಿಷ್ಟ ಪಂಗಡ, ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆರೂ.100/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ http://karnatakajudiciary.kar.nic.in/districtrecruitment.asp ಅಥವಾ https://districts.ecourts.gov.in/ballari ಯ Online Recruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು.

ಈ ಹುದ್ದೆಗಳ ಕಂಪ್ಲೀಟ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District Court of Bellary 2019 has invited application for the post of stenographers. Interested candidates can apply through online for these posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+