ದಾವಣಗೆರೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 8 ಶೀಘ್ರಲಿಪಿಗಾರ ,8 ಬೆರಳಚ್ಚುಗಾರ, 2 ಬೆರಳಚ್ಚು ನಕಲುಗಾರರು, 6 ಆದೇಶ ಜಾರಿಕಾರರ ಮತ್ತು 4 ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ದಿನಾಂಕ 16.1.2019ರಿಂದ 15.2.2019 ರ ರಾತ್ರಿ 11:59 ರ ವರೆಗೆ ಮಾತ್ರ ಸಲ್ಲಿಸತಕ್ಕದ್ದು. ಅಭ್ಯರ್ಥಿಳು ಅರ್ಜಿಯಲ್ಲಿ ತಮ್ಮ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಮತ್ತು ಇಮೇಲೆ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.

| CRITERIA | DETAILS |
| Name Of The Posts | ಶೀಘ್ರಲಿಪಿಗಾರ ,ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರ ಮತ್ತು ಜವಾನರು |
| Organisation | ಜಿಲ್ಲಾ ನ್ಯಾಯಾಲಯ |
| Educational Qualification | ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಅರ್ಹತೆ,7ನೇ ತರಗತಿ |
| Job Location | ದಾವಣಗೆರೆ |
| Salary Scale | ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಆದೇಶ ಜಾರಿಕಾರಿಗೆ 19,950/- ರಿಂದ 37,900/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳು |
| Application Start Date | January 16, 2019 |
| Application End Date | February 15, 2019 |
ವಿದ್ಯಾರ್ಹತೆ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.
ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಲ್ಲಿ ಅಜರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳೀಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಜ್ಯೂನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತೀರ್ಣರಾಗಿರತಕ್ಕದ್ದು.
ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜವಾನ ಹುದ್ದೆಗೆ 7 ನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿರುವ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ವೇತನ:
ಹುದ್ದೆಗಳಿಗೆ ಆಯ್ಕೆಯಾದ ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/- ರಿಂದ 42,000/-ರೂ,ಆದೇಶ ಜಾರಿಕಾರಿಗೆ 19,950/- ರಿಂದ 37,900/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗಿ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ವಿಧಾನ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಯು ನೇಮಕಾತಿ ಪ್ರಾಧಿಕಾರದಿಂದ ನಾಮ ನಿರ್ದೇಶಿಸಲ್ಪಟ್ಟ ಪರೀಕ್ಷಕರು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 05 ನಿಮಿಷಗಳಲ್ಲಿ ನೀಡುವ ಉಕ್ತ ಲೇಖನವನ್ನು 45 ನಿಮಿಷಗಳಲ್ಲಿ ಲಿಪ್ಯಂತರಿಸತಕ್ಕದ್ದು.
- ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.
- ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡವಾರು ಅಂಕಗಳು, ಸಂದರ್ಶನದಲ್ಲಿ ಗಳಿಸುವ ಅಂಕಗಳು ಮತ್ತು ವಿದ್ಯಾರ್ಹತೆಯಲ್ಲಿ ಪಡೆದ ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಬೆರಳಚ್ಚುಗಾರ ಹುದ್ದೆಗಳಿಗೆ ಅಭ್ಯರ್ಥಿಯು ನೇಮಕಾತಿ ಪ್ರಾಧಿಕಾರದಿಂದ ನಾಮ ನಿರ್ದೇಶಿಸಲ್ಪಟ್ಟ ಅಧಿಕಾರಿಯವರು 15 ನಿಮಿಷಗಳ ಕಾಲ ನೀಡುವ ಉಕ್ತ ಲೇಖನವನ್ನು ಬೆರಳಚ್ಚುಪಡಿಸತಕ್ಕದ್ದು.
- ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.
- ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳು, ಸಂದರ್ಶನದಲ್ಲಿ ಗಳಿಸುವ ಅಂಕಗಳು ಮತ್ತು ವಿದ್ಯಾರ್ಹತೆಲ್ಲಿ ಪಡೆದ ಶೇಕಡಾವಾರು ಅಂಕಗಳ ಮೇಲೆ ಆಯ್ಕೆ ಮಾಡಲಾಗುವುದು.
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅಭ್ಯರ್ಥಿಯು ನೇಮಕಾತಿ ಪ್ರಾಧಿಕಾರದಿಂದ ನಾಮ ನಿರ್ದೇಶಿಸಲ್ಪಟ್ಟ ಅಧಿಕಾರಿಯುವರು 15ನಿಮಿಷಗಳ ಕಾಲ ನೀಡುವ ಉಕ್ತ ಲೇಖನವನ್ನು ಬೆರಳಚ್ಚುಪಡಿಸತಕ್ಕದ್ದು.
- ಈ ಪರೀಕ್ಷೆಯು ಗರಿಷ್ಟ 100 ಅಂಕಗಳದ್ದಾಗಿದ್ದು ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಕನಿಷ್ಟ 50 ಅಂಕಗಳನ್ನು ಪಡೆಯತಕ್ಕದ್ದು.
- ಅರ್ಹತಾ ಪರೀಕ್ಷೆಯಲ್ಲಿ ಪಡೆದ ಶೇಕಡಾವಾರು ಅಂಕಗಳು, ಸಂದರ್ಶನದಲ್ಲಿ ಗಳಿಸುವ ಅಂಕಗಳು ಮತ್ತು ವಿದ್ಯಾರ್ಹತೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಳಿಸಿರುವ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:25 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಜವಾನ ಹುದ್ದೆಗೆ 7ನೇ ತರಗತಿಯ ಪರೀಕ್ಷೆಯಲ್ಲಿ ಗಳಿಸಿರುವ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮತ್ತು ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











