ಜಿಲ್ಲಾ ನ್ಯಾಯಾಲಯ ಗದಗ ಘಟಕದಲ್ಲಿ ಖಾಲಿ ಇರುವ 12 ಶೀಘ್ರಲಿಪಿಗಾರ ಹುದ್ದೆಗಳಿಗೆ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಆನ್ ಲೈನ್ ನಲ್ಲಿ ಮಾರ್ಚ್11.2019 ರ ರಾತ್ರಿ 11:59ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಅರ್ಹತೆ, ಸಂಬಳ ಮತ್ತು ಇನ್ನಿತರ ಮಾಹಿತಿಗಳನ್ನು ತಿಳಿಯಲು ಮುಂದಕ್ಕೆ ಓದಿ.
CRITERIA | DETAILS |
Name Of The Posts | ಶೀಘ್ರಲಿಪಿಗಾರ |
Organisation | ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ |
Educational Qualification | ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
Job Location | ಗದಗ |
Salary Scale | ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, |
Application Start Date | January 30, 2019 |
Application End Date | March 11, 2019 |
ವಿದ್ಯಾರ್ಹತೆ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಟಕ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕಛೇರಿ ಕಾರ್ಯ ಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆಯ ಜ್ಞಾನ ಅವಶ್ಯಕವಾಗಿರುತ್ತದೆ.
ವೇತನದ ವಿವರ:
ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
ವಯೋಮಿತಿ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿದ ದಿನಾಂಕದಂದು ಕನಿಷ್ಟ 18ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ:
ಸಾಮಾನ್ಯ ವರ್ಗ | 35ವರ್ಷ |
2A,2B,3A,3B | 38ವರ್ಷ |
ಪ.ಜಾತಿ, ಪ.ಪಂಗಡ, ಪ್ರವರ್ಗ-1 | 40ವರ್ಷ |
ಅಭ್ಯರ್ಥಿಗಳು ಈ ಅಧಿಸೂಚನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು ಮತ್ತು ಸರಕಾರಿ ಸೇವೆಯಲ್ಲಿರುವವರೆಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಆಯ್ಕೆ ವಿಧಾನ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನುಈ ರೀತಿ ನಡೆಸಲಾಗುವುದು.
ಅರ್ಹತಾ ಪರೀಕ್ಷೆಗಳಲ್ಲಿ ಗಳಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಬೆರಳಚ್ಚುಯಂತ್ರ/ಕಂಪ್ಯೂಟರ್ ನಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:
ಪ್ರವರ್ಗ- 1,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ | 50/-ರೂ |
ಸಾಮಾನ್ಯ ವರ್ಗ | 100/-ರೂ |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/gadag-onlinerecruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುವುದು. ಹಾಗೂ ಅರ್ಜಿ ಶುಲ್ಕವನ್ನು ಮಾರ್ಚ್ 14,2019 ರೊಳಗೆ ಪಾವತಿಸಬೇಕು.
ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ