ಹಾಸನ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 10 ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ ಫೆಬ್ರವರಿ 4.2019 ರಿಂದ ಮಾರ್ಚ್ 5,2019ರ ರಾತ್ರಿ 11:59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.
ಖಾಲಿ ಹುದ್ದೆಗಳ ಮೀಸಲಾತಿ ವಿವರ, ಹುದ್ದೆಗಳಿಗೆ ಕೇಳಲಾದ ಅರ್ಹತೆ ಮತ್ತು ಅರ್ಜಿ ಶುಲ್ಕ ಪಾವತಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಆದೇಶ ಜಾರಿಕಾರ ಮತ್ತು ಜವಾನ |
| Organisation | ಜಿಲ್ಲಾ ನ್ಯಾಯಾಲಯ |
| Educational Qualification | ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ, 7ನೇ ತರಗತಿ |
| Job Location | ಹಾಸನ |
| Salary Scale | ಆದೇಶ ಜಾರಿಕಾರ- 19,950/- ರಿಂದ 37,900/-ರೂ , ಜವಾನ - 17,000/- ರಿಂದ 28,950/-ರೂ |
| Application Start Date | February 4, 2019 |
| Application End Date | March 5, 2019 |
ವಿದ್ಯಾರ್ಹತೆ:
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ನಾಲ್ಕು ಚಕ್ರಗಳ ವಾಹನ ಚಾಲನಾ ಪರವಾನಗಿ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜವಾನ ಹುದ್ದೆಗಳಿಗೆ 7 ನೇ ತರಗತಿಯ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಆದೇಶ ಜಾರಿಕಾರರು: 5ಹುದ್ದೆಗಳು
ಹುದ್ದೆಗಳ ವರ್ಗೀಕರಣ
| ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಅಂಗವಿಕಲ | ಒಟ್ಟು |
| ಪ್ರವರ್ಗ- 3B | 1 | 1 | |||
| ಪ್ರವರ್ಗ- 3A | 1 | 1 | |||
| ಪ್ರವರ್ಗ -2A | 1 | 1 | |||
| ಸಾಮಾನ್ಯ ಅಭ್ಯರ್ಥಿ | 1 | 1* | 2 | ||
| ಒಟ್ಟು | 1 | 1 | 2 | 1 | 5 |
ಜವಾನ : 5ಹುದ್ದೆಗಳು
| ಮೀಸಲಾತಿ | ಇತರೆ | ಮಹಿಳೆ | ಗ್ರಾಮೀಣ | ಮಾಜಿ ಸೈನಿಕ | ಒಟ್ಟು |
| ಪರಿಶಿಷ್ಟ ಜಾತಿ | 1 | 1 | |||
| 2A ಅಭ್ಯರ್ಥಿಗಳು | 1 | 1 | |||
| ಸಾಮಾನ್ಯ | 1 | 1 | 1 | 3 | |
| ಒಟ್ಟು | 1 | 1 | 2 | 1 | 5 |
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2A,2B,3ಎ ಮತ್ತು 3Bವರ್ಗದವರಿಗೆ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು.
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ವೇತನದ ವಿವರ:
ಆದೇಶ ಜಾರಿಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,950/- ರಿಂದ 37,900/-ರೂ ಮತ್ತು
ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಆದೇಶ ಜಾರಿಕಾರ ಹುದ್ದೆಗಳಿಗೆ ಕನ್ನಡ ಓದಲು ಮತ್ತು ಬರೆಯಲು ಅಭ್ಯರ್ಥಿ ಹೊಂದಿರುವ ಪ್ರಾವೀಣ್ಯತೆ ಮತ್ತು ಅಭ್ಯರ್ಥಿಯ ಸಾಮಾನ್ಯತ ಜ್ಞಾನದ ಬಗ್ಗೆ ಸಂದರ್ಶನ.
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1ಹುದ್ದೆಗೆ 25 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕ ಹಾಗೂ ಪಾವತಿಸಬೇಕಾದ ವಿಧಾನ:
| ಸಾಮಾನ್ಯ ವರ್ಗ,ಪ್ರವರ್ಗ-2A,2B, 3Aಮತ್ತು 3B ಮತ್ತು ಮಾಜಿ ಸೈನಿಕ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ | ರೂ.200/- |
| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ | ರೂ.100/- |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/hassan-onlinerecruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.
ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demand Draft, Postal Order, Money Order ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಮಾರ್ಚ್ 7,2019 ಕಡೆಯ ದಿನಾಂಕವಾಗಿದ್ದು ಅದರೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











