ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 46 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 18,2019ರಿಂದ ಮಾರ್ಚ್ 20,2019ರ ರಾತ್ರಿ 11:59 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
CRITERIA | DETAILS |
Name Of The Posts | ಜವಾನ |
Organisation | ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, |
Educational Qualification | 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ |
Job Location | ಮೈಸೂರು |
Salary Scale | 17,000/- ರಿಂದ 28,950/-ರೂ |
Application Start Date | February 18, 2019 |
Application End Date | March 29, 2019 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.
ಹುದ್ದೆಗಳ ವರ್ಗೀಕರಣ:
ಮೀಸಲಾತಿ | ಇತರೆ | ಮಹಿಳೆ | ಕ.ಮಾ.ಅ. | ಗ್ರಾಮೀಣ | ಮಾ.ಸೈ | ಅಂಗವಿಕಲ | ಯೋ.ನಿ.ಅ. | ಒಟ್ಟು |
ಪ.ಜಾತಿ | 2 | 2 | 2 | 1** | 7 | |||
ಪ.ಪಂಗಡ | 1 | 1 | 2 | |||||
ಪ್ರವರ್ಗ-1 | 1 | 1 | 2 | |||||
2A | 1 | 2 | 1 | 1 | 1 | 6 | ||
2B | 1 | 1 | ||||||
3A | 1 | 1 | 2 | |||||
3B | 1 | 1 | 1 | 3 | ||||
ಸಾಮಾನ್ಯ | 4 | 7 | 1 | 6 | 2 | 1*+1** | 1 | 23 |
ಒಟ್ಟು | 10 | 13 | 2 | 13 | 2 | 3 | 3 | 46 |
* ದೃಷ್ಟಿಮಾಂದ್ಯ/ ದೃಷ್ಟಿದೋಷವುಳ್ಳ ಅಭ್ಯರ್ಥಿ (Blind & Low Vision)
** ಶ್ರವಣದೋಷವುಳ್ಳ ಅಭ್ಯರ್ಥಿ (Hearing impaired)
ವಯೋಮಿತಿ:
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗ | 35 ವರ್ಷ |
2A,2B,3A,3B | 38 ವರ್ಷ |
ಪ.ಜಾತಿ, ಪ.ಪಂಗಡ, ಪ್ರವರ್ಗ-1 | 40 ವರ್ಷ |
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಕೂಡದು.
ವಯೋಮಿತಿ ಸಡಿಲಿಕೆ:
ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಗೊಂಡು ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ ಗರಿಷ್ಠ ವಯೋಮಿತಯನ್ನು ಅವರು ಎಷ್ಟು ವರ್ಷಗಳ ಅವಧಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.
ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ, ಅವನು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 3 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು.
ಅಭ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿಧವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು
ಅಭ್ಯರ್ಥಿಯು ಕರ್ನಾಟಕ ರಾಜ್ಯದಲ್ಲಿರುವ ಭಾರತ ಸರ್ಕಾರದ ಜನಗಣತಿ ಸಂಸ್ಥೆಯಲ್ಲಿ ಈಗ ಹುದ್ದೆಯನ್ನು ಹೊಂದಿದ್ದ ಪಕ್ಷದಲ್ಲಿ ಗರಿಷ್ಠ ವಯೋಮಿತಿಯನ್ನು ಅಭ್ಯರ್ಥಿಯು ಎಷ್ಟು ವರ್ಷಗಳ ಅವಧಿಗೆ ಆ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವರೋ ಅಥವಾ ಹಿಂದೆ ಸೇವೆ ಸಲ್ಲಿಸಿದ್ದಾರೋ ಅಷ್ಟು ವರ್ಷಗಳ ಅಥವಾ 5 ವರ್ಷಗಳ ಅವಧಿ, ಅದರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳು.
ಅಭ್ಯರ್ಥಿಯು ನ್ಯಾಷನಲ್ ಕೆಡೆಟ್ ಕಾರ್ಪ್ಸ್ ನಲ್ಲಿ ಪೂರ್ಣಕಾಲಿಕ ಪರೀಕ್ಷಕರಾಗಿ ಸೇವೆ ಸಲ್ಲಿಸಿ ಬಿಡುಗಡೆಯಾಗಿರುವ ವ್ಯಕ್ತಿಯಾಗಿದ್ದರೆ ಅಂತಹ ಕೆಡೆಟ್ ಪರೀಕ್ಷಕನಾಗಿ ಸೇವೆ ಸಲ್ಲಿಸಿದ್ದಷ್ಟು ವರ್ಷಗಳು.
ಮಾಜಿ ಸೈನಿಕರು,ವಿಧವೆಯರು, ಅಂಗವಿಕಲರು ಮತ್ತು ಜೀತಕಾರ್ಮಿಕರು ಹಾಗೂ ವಯೋಮಿತಿ ರಿಯಾಯಿತಿಗೆ ಅರ್ಹರಾದ ಇನ್ನಿತರರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಪಡೆದಿಟ್ಟುಕೊಂಡಿರತಕ್ಕದ್ದು.
ಆಯ್ಕೆ ವಿಧಾನ:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕ ಹಾಗೂ ಪಾವತಿಸಬೇಕಾದ ವಿಧಾನ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಹಾಗೂ ಅಂಗವಿಕಲ ಅಭ್ಯರ್ಥಿ | ಯಾವುದೇ ಶುಲ್ಕವಿಲ್ಲ |
ಪ್ರವರ್ಗ-2A,2B,3A,3B ಅಭ್ಯರ್ಥಿಗಳಿಗೆ | ರೂ.100/- |
ಸಾಮಾನ್ಯ ವರ್ಗ | ರೂ.200/- |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.
ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.
ಇದನ್ನು ಹೊರತುಪಡಿಸಿ ಯಾವುದೇ ನಗದು, ಡಿಮ್ಯಾಂಡ್ ಡ್ರಾಫ್ಟ್ : ಪೋಸ್ಟಲ್ ಆರ್ಡರ್: ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ