ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2020: ವಿವಿಧ 55 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 55 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬೆಳಗಾವಿ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ..ಜ.21ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಬೆಳಗಾವಿ (ಕರ್ನಾಟಕ)
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/- ರಿಂದ 42,000/-ರೂ, ಆದೇಶ ಜಾರಿಕಾರ- 19,950/- ರಿಂದ 37,900/-ರೂ
Application Start Date January 6, 2020
Application End Date January 21, 2020

ಹುದ್ದೆಗಳ ವಿವರ:

ಶೀಘ್ರಲಿಪಿಗಾರ- 28ಹುದ್ದೆಗಳು
ಬೆರಳಚ್ಚುಗಾರರು-10 ಹುದ್ದೆಗಳು
ಬೆರಳಚ್ಚು ನಕಲುಗಾರರು- 13 ಹುದ್ದೆಗಳು
ಆದೇಶ ಜಾರಿಕಾರ- 4 ಹುದ್ದೆಗಳು

ವಿದ್ಯಾರ್ಹತೆ:

ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಹಿರಿಯ ಶ್ರೇಣಿಯ ಬೆರಳಚ್ಚು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಕರ್ನಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಕಿರಿಯ ಶ್ರೇಣಿಯ ಬೆರಳಚ್ಚು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವನ್ನಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಘು ಹಾಗೂ ಭಾರಿ ವಾಹನ ಚಾಲನಾ ಪತ್ರ ಹೊಂದಿರಬೇಕು.

ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ:

ಹುದ್ದೆಗಳ ಹೆಸರುವೇತನ (ತಿಂಗಳಿಗೆ)
ಶೀಘ್ರಲಿಪಿಗಾರರೂ.27,650/- ರಿಂದ 52,650/-ರೂ
ಬೆರಳಚ್ಚುಗಾರರೂ.21,400/- ರಿಂದ 42,000/-ರೂ
ಬೆರಳಚ್ಚು ನಕಲುಗಾರರೂ.21,400/- ರಿಂದ 42,000/-ರೂ
ಆದೇಶ ಜಾರಿಕಾರರೂ.19,950/- ರಿಂದ 37,900/-ರೂ

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 21,2020ರಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆಯ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಒಂದು ನಿಮಿಷಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳಚ್ಚು ಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ 15 ನಿಮಿಷಗಳ ಅವಧಿಯಂತೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಮಾಡಲು ಉಕ್ತಲೇಖನ ನೀಡಲಾಗುವುದು.

ನಿಗದಿತ ಅರ್ಜಿ ಶುಲ್ಕ:

ವಿವಿಧ ವರ್ಗೀಕರಣಶೀಘ್ರಲಿಪಿಗಾರರ ಹುದ್ದೆಗೆಬೆರಳಚ್ಚುಗಾರ ಹುದ್ದೆಗೆ ಬೆರಳಚ್ಚು ನಕಲುಗಾರ ಹುದ್ದೆಗೆ ಆದೇಶ ಜಾರಿಕಾರ ಹುದ್ದೆಗೆ
ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆರೂ.250/- ಅರ್ಜಿ ಶುಲ್ಕ ಪಾವತಿಸಬೇಕು.ರೂ.200/- ಅರ್ಜಿ ಶುಲ್ಕ ಪಾವತಿಸಬೇಕು.ರೂ.200/- ಅರ್ಜಿ ಶುಲ್ಕ ಪಾವತಿಸಬೇಕು.ರೂ.100/- ಅರ್ಜಿ ಶುಲ್ಕ ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆಶುಲ್ಕ ವಿನಾಯಿತಿ ಇರುತ್ತದೆಶುಲ್ಕ ವಿನಾಯಿತಿ ಇರುತ್ತದೆಶುಲ್ಕ ವಿನಾಯಿತಿ ಇರುತ್ತದೆಶುಲ್ಕ ವಿನಾಯಿತಿ ಇರುತ್ತದೆ

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ:

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/belagavi or https://districts.ecourts.gov.in/belagavi-onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಜನವರಿ 23,2020ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬೆಳಗಾವಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/belagavi-onlinerecruitment ಗೆ ಭೇಟ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 21,2020ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
District court of belagavi recruitment 2020 notification has been released in official website for the recruitment of 55 various posts. Interested candidates can apply through online before 21st January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+