ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 54 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 5 ಶೀಘ್ರಲಿಪಿಗಾರ ,10 ಬೆರಳಚ್ಚುಗಾರ, 5 ಬೆರಳಚ್ಚು ನಕಲುಗಾರರು, 11 ಆದೇಶ ಜಾರಿಕಾರರ ಮತ್ತು 23 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ 16.01.2019 ರಿಂದ ದಿನಾಂಕ 15.02.2019 ರ ರಾತ್ರಿ 11:59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.

ಚಿಕ್ಕಮಗಳೂರು ಜಿಲ್ಲಾ ನ್ಯಾಯಲಯ 54 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಶೀಘ್ರಲಿಪಿಗಾರ ,ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರ ಮತ್ತು ಜವಾನರು
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಅರ್ಹತೆ, 7ನೇ ತರಗತಿ
Job Location ಚಿಕ್ಕಮಗಳೂರು
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಆದೇಶ ಜಾರಿಕಾರಿಗೆ 19,950/- ರಿಂದ 37,900/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳು
Application Start Date January 16, 2019
Application End Date February 15, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಟಕ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಅಥವಾ

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು..

ಬೆರಳಚ್ಚುಗಾರ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಲ್ಲಿ ಉತ್ತೀರ್ಣರಾಗಿರಬೇಕು.

ಅಥವಾ

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.ಅಥವಾ

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಜ್ಯೂನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಅಥವಾ

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜವಾನ ಹುದ್ದೆಗೆ 7 ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಶೀಘ್ರಲಿಪಿಗಾರರು: 05 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಮಹಿಳೆಇತರೆಒಟ್ಟು
ಪರಿಶಿಷ್ಟ ಜಾತಿ-01*01
ಪರಿಶಿಷ್ಟ ಪಂಗಡ01*01*02
ಪ್ರವರ್ಗ-2A- 0101
ಪ್ರವರ್ಗ-2B01*- 01
ಒಟ್ಟು020305

* ಹಿಂಬಾಕಿ ಹುದ್ದೆಗಳು

ಅಧಿಸೂಚಿತ ಅಂಗವಿಕಲತೆ ಹೊಂದಿದ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಆಯಾ ಪ್ರವರ್ಗದ ಇತರ ಅಂಗವಿಕಲತೆಯುಳ್ಳ ಅರ್ಹ ವಿಕಲಚೇತನ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಒಂದು ವೇಳೆ ಯಾವುದೇ ವಿಕಲ ಚೇತನ ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ, ಆಯಾ ಪ್ರವರ್ಗದ ಇತರ ಅರ್ಹ ಅಭ್ಯರ್ಥಿಯಿಂದ ಭರ್ತಿ ಮಾಡಿಕೊಳ್ಳಲಾಗುವುದು.

ಬೆರಳಚ್ಚುಗಾರ: 10 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಮಹಿಳೆಗ್ರಾಮೀಣಕನ್ನಡ ಮಾಧ್ಯಮ ಅಭ್ಯರ್ಥಿಮಾ.ಸೈಅಂ.ಅಇತರೆಒಟ್ಟು
ಸಾಮಾನ್ಯ ಅಭ್ಯರ್ಥಿ0101- 01- - 04
ಪರಿಶಿಷ್ಟ ಜಾತಿ- 01- - - - 01
ಪ್ರವರ್ಗ-1- - - - 01*- 01
ಪ್ರವರ್ಗ-2A01- - - - - 01
ಪ್ರವರ್ಗ-2B- - - - 01*- 01
ಪ್ರವರ್ಗ-3A- - - - 01*- 01
ಪ್ರವರ್ಗ-3B01- - -- - 01
ಒಟ್ಟು0302- 0103- 10

*3 ಹಿಂಬಾಕಿ ಹುದ್ದೆಗಳು

ಬೆರಳಚ್ಚು ನಕಲುಗಾರ : 05 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಮಹಿಳೆಗ್ರಾಮೀಣ ಅಭ್ಯರ್ಥಿಮಾಜಿ ಸೈನಿಕಅಂಗವಿಕಲ ಇತರೆ ಒಟ್ಟು
ಸಾಮಾನ್ಯ ಅಭ್ಯರ್ಥಿ- 0101*01(ದೃಷ್ಟಿ ಮಾಂದ್ಯ)- 03
ಪ್ರವರ್ಗ-2A- - - - 0101
ಪ್ರವರ್ಗ-3A01- - - - 01
ಟ್ಟು010101010105

* ಹಿಂಬಾಕಿ ಹುದ್ದೆಗಳು

ಆದೇಶ ಜಾರಿಕಾರರು: 11 ಹುದ್ದೆಗಳು

ಮೀಸಲಾತಿಇತರೆಗ್ರಾಮೀಣಮಾಜಿ ಸೈನಿಕಇತರೆಒಟ್ಟು
ಸಾಮಾನ್ಯ ಅಭ್ಯರ್ಥಿ 0202- 0105
ಪರಿಶಿಷ್ಟ ಜಾತಿ010101- 03
ಪ್ರವರ್ಗ-1- 01- - 01
ಪ್ರವರ್ಗ-2A0101- - 02
ಒಟ್ಟು0405010111

ಜವಾನ: 23 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಮಹಿಳೆಗ್ರಾಮೀಣಮಾಜಿ ಸೈನಿಕಯೋಜನಾ ನಿರಾಶ್ರಿತ ಅಭ್ಯರ್ಥಿಅಂಗವಿಕಲ ಅಭ್ಯರ್ಥಿಇತರೆ ಒಟ್ಟು
ಸಾಮಾನ್ಯ ಅಭ್ಯರ್ಥಿ0303010101

(ದೃಷ್ಟಿ ಮಾಂದ್ಯ)

0211
ಪರಿಶಿಷ್ಟ ಜಾತಿ0102- - - 0104
ಪರಿಶಿಷ್ಟ ಪಂಗಡ01- -- - - 01
ಪ್ರವರ್ಗ-101-- - - - 01
ಪ್ರವರ್ಗ-2A0101- - - 0103
ಪ್ರವರ್ಗ-2B01- - - - - 01
ಪ್ರವರ್ಗ-3A01- - - - - 01
ಪ್ರವರ್ಗ- 3B01- - - - - 01
ಒಟ್ಟು100601 0101 04 23

ವೇತನ:

ಹುದ್ದೆಗಳಿಗೆ ಆಯ್ಕೆಯಾದ ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ,ಆದೇಶ ಜಾರಿಕಾರಿಗೆ 19,950/- ರಿಂದ 37,900/-ರೂ, ಜವಾನ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗಿ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು

ಒಂದು ನಿಮಿಷಕ್ಕೆ 120 ಪದಗಳ ವೇಗದಲ್ಲಿ 05 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಒಂದು ಹುದ್ದೆಗೆ ೫ ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಬೆರಳಚ್ಚುಗಾರ ಹುದ್ದೆಗಳಿಗೆ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ೧೫ ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಕೆ ಆಯ್ಕೆ ಮಾಡಲಾಗುವುದು. ೧ ಹುದ್ದೆಗೆ ೫ ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಆದೇಶ ಜಾರಿಕಾರ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಳಿಸಿರುವ ಗರಿಷ್ಟ ಅಂಕಗಳ ಅರ್ಹತೆಯ ಆಧಾರದ ಮೇಲೆ 1:25 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನದ ಪ್ರಕ್ರಿಯೆಗೆ ತೊಡಗಿಸಲಾಗುವುದು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ೧ ಹುದ್ದೆಗೆ ೧೦ ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ ವರ್ಗ,ಪ್ರವರ್ಗ-2A,2B, 3Aಮತ್ತು 3Bಗೆ ಸೇರಿದ ಅಭ್ಯರ್ಥಿಗಳಿಗೆರೂ.100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆರೂ.50/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/chikkamagaluru-onlinerecruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan download ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan download ಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
District court of Chikkamagaluru has invited application for the post of stenos, typist, copy-typist,order enforcer and peon. Interested candidsates can apply before 15 february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X