ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 10 ಶೀಘ್ರಲಿಪಿಗಾರ, 6 ಬೆರಳಚ್ಚುಗಾರ, 13 ಬೆರಳಚ್ಚು ನಕಲುಗಾರ ಮತ್ತು 5 ಆದೇಶ ಜಾರಿಕಾರ ಸೇರಿದಂತೆ ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.
CRITERIA | DETAILS |
Name Of The Posts | ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ |
Organisation | ಜಿಲ್ಲಾ ನ್ಯಾಯಾಲಯ |
Educational Qualification | ಎಸ್ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
Job Location | ದಕ್ಷಿಣ ಕನ್ನಡ ಜಿಲ್ಲೆ (ಕರ್ನಾಟಕ) |
Salary Scale | ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/- ರಿಂದ 42,000/-ರೂ, ಆದೇಶ ಜಾರಿಕಾರರಿಗೆ 19,950/- ರಿಂದ 37,900/-ರೂ |
Application Start Date | January 13, 2020 |
Application End Date | February 12, 2020 |
ಹುದ್ದೆಗಳ ವಿವರ:
ಶೀಘ್ರಲಿಪಿಗಾರ - 10 ಹುದ್ದೆಗಳು
ಬೆರಳಚ್ಚುಗಾರರು - 6 ಹುದ್ದೆಗಳು
ಬೆರಳಚ್ಚು ನಕಲುಗಾರರು - 13 ಹುದ್ದೆಗಳು
ಆದೇಶ ಜಾರಿಕಾರ - 5 ಹುದ್ದೆಗಳು
ಒಟ್ಟು 34 ಹುದ್ದೆಗಳು
ವಿದ್ಯಾರ್ಹತೆ:
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಶೀಘ್ರಲಿಪಿಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಬೆರಳಚ್ಚುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಬೆರಳಚ್ಚುಗಾರ ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಆದೇಶ ಜಾರಿಕಾರ ಹುದ್ದೆಗೆ ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.
ವೇತನದ ವಿವರ:
ಹುದ್ದೆಗಳ ಹೆಸರು | ವೇತನ (ತಿಂಗಳಿಗೆ) |
ಶೀಘ್ರಲಿಪಿಗಾರ | ರೂ.27,650/- ರಿಂದ 52,650/-ರೂ |
ಬೆರಳಚ್ಚುಗಾರ | ರೂ.21,400/--ರಿಂದ 42,000/-ರೂ |
ಬೆರಳಚ್ಚು ನಕಲುಗಾರ | ರೂ.21,400/--ರಿಂದ 42,000/-ರೂ |
ಆದೇಶ ಜಾರಿಕಾರ | ರೂ 19,950/- ರಿಂದ 37,900/-ರೂ |
ಆಯ್ಕೆಯ ವಿಧಾನ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಕನ್ನಡ /ಇಂಗ್ಲೀಷ್ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಬೆರಳಚ್ಚು ಯಂತ್ರ/ಕಂಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ಕಂಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
ಆದೇಶ ಜಾರಿಕಾರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 25 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು.
ನಿಗದಿತ ಅರ್ಜಿ ಶುಲ್ಕ ಮತ್ತು ಪಾವತಿಸುವ ವಿಧಾನ:
ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ | ರೂ.200/- |
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ | ರೂ.100/- |
ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ | ರೂ.100/- |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/dakshinakannada ನಲ್ಲಿ ನೀಡಲಾದ recruitment ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.
ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಫೆಬ್ರವರಿ 14,2020ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.
ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/dakshinakannada ಗೆ ಭೇಟ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 12,2020ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ