ರಾಯಚೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 11 ಶೀಘ್ರಲಿಪಿಗಾರ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ 11 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ರಾಯಚೂರು ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜುಲೈ 16,2019ರ ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Educational Qualification ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ರಾಯಚೂರು
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ
Application Start Date June 17, 2019
Application End Date July 16, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಟಕ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಹೊರಡಿಸಿದ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ಗರಿಷ್ಠ 35 ವರ್ಷ , ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಎಸ್ ಸಿ/ಎಸ್ ಟಿ ಪ್ರವರ್ಗ-1ರ ಗರಿಷ್ಠ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27,650/- ರಿಂದ 52,650/-ರೂ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆಯ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಶಬ್ದಗಳಂತೆ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅರ್ಹತೆ, ಪ್ರವರ್ಗ-1, ಪ್ರವರ್ಗ-2ಎ,2 ಬಿ,3ಎ,3ಬಿ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಅರ್ಜಿ ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ಜುಲೈ 17,2019 ಕೊನೆಯ ದಿನವಾಗಿರುತ್ತದೆ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://districts.ecourts.gov.in/raichur ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 16,2019 ರ ರಾತ್ರಿ 11:59 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
District court of Raichur has invited application for the post of 11 stenographer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X