ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಖಾಲಿ ಇರುವ 24 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ |
| Organisation | ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ |
| Educational Qualification | ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ |
| Job Location | ರಾಯಚೂರು ಜಿಲ್ಲೆ (ಕರ್ನಾಟಕ) |
| Salary Scale | ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/- ರಿಂದ 42,000/-ರೂ, ಆದೇಶ ಜಾರಿಕಾರ- 19,950/- ರಿಂದ 37,900/-ರೂ |
| Application Start Date | February 12, 2020 |
| Application End Date | March 12, 2020 |
ಹುದ್ದೆಗಳ ವಿವರ:
ಶೀಘ್ರಲಿಪಿಗಾರ- 12 ಹುದ್ದೆಗಳು
ಬೆರಳಚ್ಚುಗಾರರು-6 ಹುದ್ದೆಗಳು
ಬೆರಳಚ್ಚು ನಕಲುಗಾರರು- 2 ಹುದ್ದೆಗಳು
ಆದೇಶ ಜಾರಿಕಾರ- 4 ಹುದ್ದೆಗಳು
ಒಟ್ಟು - 24 ಹುದ್ದೆಗಳು
ವಿದ್ಯಾರ್ಹತೆ:
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಶೀಘ್ರಲಿಪಿಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಬೆರಳಚ್ಚುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ಬೆರಳಚ್ಚುಗಾರ ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ ಹೊರಡಿಸಿದ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ
ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ನೀಡಲಾಗುವ ವೇತನದ ವಿವರ:
| ಹುದ್ದೆಗಳ ಹೆಸರು | ವೇತನ (ತಿಂಗಳಿಗೆ) |
| ಶೀಘ್ರಲಿಪಿಗಾರ | ರೂ.27,650/- ರಿಂದ 52,650/-ರೂ |
| ಬೆರಳಚ್ಚುಗಾರ | ರೂ.21,400/--ರಿಂದ 42,000/-ರೂ |
| ಬೆರಳಚ್ಚು ನಕಲುಗಾರ | ರೂ.21,400/--ರಿಂದ 42,000/-ರೂ |
| ಆದೇಶ ಜಾರಿಕಾರ | ರೂ 19,950/- ರಿಂದ 37,900/-ರೂ |
ಆಯ್ಕೆಯ ವಿಧಾನ:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ನಿಮಿಷ ಒಂದಕ್ಕೆ 120 ಪದಗಳ ದರದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾವುದು.
ನಿಗಧಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಯ ಒಟ್ಟು ಅಂಕಗಳ ಶೇಕಡವಾರುವಿನ ಮೊತ್ತದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಆದೇಶ ಜಾರಿಕಾರ ಹುದ್ದೆಗಳಿಗೆ ನಿಗಧಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಯ ಒಟ್ಟು ಅಂಕಗಳ ಶೇಕಡವಾರುವಿನ ಮೊತ್ತದ ಆಧಾರದ ಮೇಲೆ 1:25 ರಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕ ಮತ್ತು ಪಾವತಿಸುವ ವಿಧಾನ:
| ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ | ರೂ.200/- |
| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ | ರೂ.100/- |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/raichur-onlinerecruitment ನಲ್ಲಿ ನೀಡಲಾದ recruitment ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.
ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಮಾರ್ಚ್ 13,2020ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.
ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಯಚೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/raichur-onlinerecruitment ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 12,2020ರ ರಾತ್ರಿ 11:59ರೊಳಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











