ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 9 ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿ

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಜಯಪುರ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 9 ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ವಿಜಯಪುರ ಜಿಲ್ಲಾ ನ್ಯಾಯಲಯದಲ್ಲಿ ಉದ್ಯೋಗಾವಕಾಶ….ಮಾ.2ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ವಿಜಯಪುರ (ಕರ್ನಾಟಕ)
Salary Scale ತಿಂಗಳಿಗೆ 21,400/- ರಿಂದ 42,000/-ರೂ
Application Start Date February 1, 2020
Application End Date March 2, 2020

ವಿದ್ಯಾರ್ಹತೆ:

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಕರ್ನಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಬೆರಳಚ್ಚು ಪ್ರೌಢ ದರ್ಜೆಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಕರ್ನಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಬೆರಳಚ್ಚು ಜ್ಯೂನಿಯರ್ ಗ್ರೇಡ್ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಮಾರ್ಚ್ 2,2020ರ ಅನ್ವಯ ಕನಿಷ್ಠ 18ರಿಂದ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, 2A,2B,3A ಮತ್ತು 3B ಯ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ವೇತನದ ವಿವರ:

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆಯ ವಿಧಾನ:

ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ನೈಪುಣ್ಯ/ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಒಂದು ಹುದ್ದೆಗೆ 5 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಹುದ್ದೆಗಳಿಗೆ ಪಾವತಿಸಬೇಕಾದ ನಿಗದಿತ ಶುಲ್ಕ ಹಾಗೂ ವಿಧಾನ:

ಸಾಮಾನ್ಯ,ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳಿಗೆ200/-ರೂ
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲ ಮತ್ತು ಪ್ರವರ್ಗ- 1 ಅಭ್ಯರ್ಥಿಗಳಿಗೆ100/-ರೂ

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/vijayapura onlinerecruitment ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ನೆಟ್ ಬ್ಯಾಂಕಿಂಗ್/ ಕ್ರೆಡಿಕ್ಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಅನ್ನು ಡೌನ್ ಲೋಡ್ ಮಾಡುವ ಸೌಲಭ್ಯದ ಮೂಲಕ ಶುಲ್ಕವನ್ನು ಪಾವತಿಸತಕ್ಕದ್ದು.

ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ' ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಇದನ್ನು ಹೊರತುಪಡಿಸಿ ಯಾವುದೇ ಡಿಮ್ಯಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು ಮಾರ್ಚ್ 4,2020 ಕಡೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://districts.ecourts.gov.in/vijayapura ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 2,2020ರ ರಾತ್ರಿ 11:59 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಬೆರಳಚ್ಚುಗಾರರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಬೆರಳಚ್ಚು ನಕಲುಗಾರರು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District court of vijayapura recruitment 2020 notification has been released on official website for the recruitment of 9 typist & typist-copyists posts. Interested candidates can apply through online before 2nd March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X