ತುಮಕೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2019: 49 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ 14 ಶೀಘ್ರಲಿಪಿಗಾರ ,6 ಬೆರಳಚ್ಚುಗಾರ ಬ್ಯಾಕ್ ಲಾಗ್, 4 ಬೆರಳಚ್ಚು ನಕಲುಗಾರ, 16 ಜಾರಿ ಪೇದೆ ಮತ್ತು 9 ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ 21.01.2019 ರಿಂದ ದಿನಾಂಕ 20.02.2019 ರ ರಾತ್ರಿ 11:59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.

ತುಮಕೂರು ಜಿಲ್ಲಾ ನ್ಯಾಯಾಲಯ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಶೀಘ್ರಲಿಪಿಗಾರ ,ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು, ಜಾರಿಪೇದೆ ಮತ್ತು ಸೇವಕ
Organisation ಜಿಲ್ಲಾ ನ್ಯಾಯಾಲಯ
Educational Qualification ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಅರ್ಹತೆ, 7ನೇ ತರಗತಿ
Job Location ತುಮಕೂರು
Salary Scale ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಜಾರಿ ಪೇದೆಗಳಿಗೆ 19,950/- ರಿಂದ 37,900/-ರೂ, ಸೇವಕ ಹುದ್ದೆಗಳಿಗೆ 17,000/- ರಿಂದ 28,950/-ರೂ
Application Start Date January 21, 2019
Application End Date February 20, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಸೀನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸಲಾದ ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲಿ ಜ್ಯೂನಿಯರ್ ದರ್ಜೆಯ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಜಾರಿ ಪೇದೆ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.ಲಘು ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಸೇವಕ ಹುದ್ದೆಗೆ 7 ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.

ಶೀಘ್ರಲಿಪಿಗಾರರು: 14 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಮಹಿಳೆಗ್ರಾಮೀಣಯೋಜನಾ ನಿರಾಶ್ರಿತಅಂಗವಿಕಲ ಮಾಜಿ ಸೈನಿಕಒಟ್ಟು
ಪರಿಶಿಷ್ಟ ಜಾತಿ01- - - 0102
ಪರಿಶಿಷ್ಟ ಪಂಗಡ- 01- - - 01
ಪ್ರವರ್ಗ-1- 01- - -01
ಪ್ರವರ್ಗ-2A02*- - - - 02
ಪ್ರವರ್ಗ-2B0101- - - 02
ಪ್ರವರ್ಗ-3A- 01- - - 01
ಪ್ರವರ್ಗ-3B- 01- -- 01
ಸಾಮಾನ್ಯ ಅರ್ಹತೆ 01*010101(ದೃಷ್ಠಿಮಾಂದ್ಯ)- 04
ಒಟ್ಟು050601010114
* ಸಾಮಾನ್ಯ ಮಹಿಳೆ ಮತ್ತು ಪ್ರವರ್ಗ -2A ಮಹಿಳೆಯಲ್ಲಿ ಒಂದು ಹುದ್ದೆ ಹೊರತುಪಡಿಸಿ ಉಳಿದ ಎಲ್ಲ ಬಿಂದುಗಳು ಬ್ಯಾಕ್ ಲಾಗ್ ಹುದ್ದೆಗಳಾಗಿರುತ್ತವೆ.

ಬೆರಳಚ್ಚುಗಾರ: 6 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಅಂ.ಅಯೋಜನಾ ನಿರಾಶ್ರಿತಒಟ್ಟು
ಪರಿಶಿಷ್ಟ ಪಂಗಡ01* (ದೃಷ್ಠಿಮಾಂದ್ಯ) -01
ಪ್ರವರ್ಗ -2B01* (ದೃಷ್ಠಿಮಾಂದ್ಯ) -01
ಪ್ರವರ್ಗ-2A- 0101
ಪ್ರವರ್ಗ- 3A01* (ದೃಷ್ಠಿಮಾಂದ್ಯ)- 01
ಪ್ರವರ್ಗ-3B01* (ದೃಷ್ಠಿಮಾಂದ್ಯ)- 01
ಸಾಮಾನ್ಯ ಅಭ್ಯರ್ಥಿ- 0101
ಒಟ್ಟು040206
* ಬ್ಯಾಕ್ ಲಾಗ್ ಹುದ್ದೆಗಳು

ಬೆರಳಚ್ಚು ನಕಲುಗಾರ : 04 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಇತರೆಮಹಿಳೆಗ್ರಾಮೀಣ ಅಭ್ಯರ್ಥಿಒಟ್ಟು
ಪರಿಶಿಷ್ಟ ಪಂಗಡ- 01- 01
ಪ್ರವರ್ಗ-2A- - 0101
ಸಾಮಾನ್ಯ ಅಭ್ಯರ್ಥಿ0101-02
ಒಟ್ಟು01020104

ಜಾರಿ ಪೇದೆ: 16 ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಇತರೆಮಹಿಳೆಗ್ರಾಮೀಣಕನ್ನಡ ಮಾದ್ಯಮಅಂಗವಿಕಲಮಾಜಿ ಸೈನಿಕಒಟ್ಟು
ಪರಿಶಿಷ್ಟ ಜಾತಿ- 0101 01 - - 03
ಪರಿಶಿಷ್ಟ ಪಂಗಡ01---- - 01
ಪ್ರವರ್ಗ-2A- 01- 01- - 02
ಪ್ರವರ್ಗ-3A- - - - 01(ದೃ.ಮಾ)- 01
ಪ್ರವರ್ಗ-3B- 01- - - - 01
ಸಾಮಾನ್ಯ ಅರ್ಹತೆ010402- - 0108
ಒಟ್ಟು02070302010116

ಸೇವಕ: 9ಹುದ್ದೆಗಳು

ಹುದ್ದೆಗಳ ವರ್ಗೀಕರಣ:

ವರ್ಗೀಕರಣಇತರೆಮಹಿಳೆಗ್ರಾಮೀಣ ಯೋಜನಾ ನಿರಾಶ್ರಿತ ಅಭ್ಯರ್ಥಿಮಾಜಿ ಸೈನಿಕ ಒಟ್ಟು
ಪರಿಶಿಷ್ಟ ಜಾತಿ
- 01- - - 01
ಪ್ರವರ್ಗ-2A- 01- 01- 02
ಪ್ರವರ್ಗ-3A- 01- - - 01
ಪ್ರವರ್ಗ- 3B- 01- - 01
ಸಾಮಾನ್ಯ ಅಭ್ಯರ್ಥಿ0101- 010104
ಟ್ಟು 01 04 01020109

ವೇತನ:

ಹುದ್ದೆಗಳಿಗೆ ಆಯ್ಕೆಯಾದ ಶೀಘ್ರಲಿಪಿಗಾರರಿಗೆ 27,650/- ರಿಂದ 52,650/-ರೂ, ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರಿಗೆ 21,400/-- ರಿಂದ 42,000/-ರೂ, ಜಾರಿ ಪೇದೆಗಳಿಗೆ 19,950/- ರಿಂದ 37,900/-ರೂ, ಸೇವಕ ಹುದ್ದೆಗಳಿಗೆ 17,000/- ರಿಂದ 28,950/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು ಸಾಮಾನ್ಯ ವರ್ಗದವರಿಗೆ 35 ವರ್ಷ, 2A,2B,3Bವರ್ಗದವರಿಗಿ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ 40 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಆಯ್ಕೆ ವಿಧಾನ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನುಈ ರೀತಿ ನಡೆಸಲಾಗುವುದು.ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು ಒಂದು ನಿಮಿಷಕ್ಕೆ 120 ಪದಗಳ ದರದಲ್ಲಿ ತಲಾ 05 ನಿಮಿಷಗಳ ಕನ್ನಡ ಮತ್ತು ಇಂಗ್ಲೀಷ್ ಉಕ್ತಲೇಖನವನ್ನು ನೀಡುವರು. ಅದನ್ನು ಅಭ್ಯರ್ಥಿಗಳು 45 ನಿಮಿಷಗಳಲ್ಲಿ ವಿಶೇಷ ತಂತ್ರಾಂಶದ ಗಣಕಯಂತ್ರದಲ್ಲಿ ಬೆರಳಚ್ಚು ಮಾಡತಕ್ಕದ್ದು. ಬೆರಳಚ್ಚುಯಂತ್ರದ ಕೀಲಿಮಣೆಯನ್ನು ಹೋಲುವ ತಂತ್ರಾಂಶವನ್ನು ಗಣಕಯಂತ್ರಗಳಿಗೆ ಅಳವಡಿಸಲಾಗುವುದು.

ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಒಂದು ಹುದ್ದೆಗೆ 5 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನವನ್ನು ಈ ರೀತಿ ನಡೆಸಲಾಗುವುದು.

ನೇಮಕಾತಿ ಪ್ರಾಧಿಕಾರದಿಂದ ನೇಮಿಸಲಾದ ಪರೀಕ್ಷಕರು15 ನಿಮಿಷಗಳ ಕನ್ನಡ ಮತ್ತು ಇಂಗ್ಲೀಷ್ ಉಕ್ತಲೇಖನವನ್ನು ನೀಡುವರು. ಅದನ್ನು ಅಭ್ಯರ್ಥಿಗಳು ವಿಶೇಷ ತಂತ್ರಾಂಶದ ಗಣಕಯಂತ್ರದಲ್ಲಿ ಬೆರಳಚ್ಚು ಮಾಡತಕ್ಕದ್ದು. ಬೆರಳಚ್ಚುಯಂತ್ರದ ಕೀಲಿಮಣೆಯನ್ನು ಹೋಲುವ ತಂತ್ರಾಂಶವನ್ನು ಗಣಕಯಂತ್ರಗಳಿಗೆ ಅಳವಡಿಸಲಾಗುವುದು.

ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಒಂದು ಹುದ್ದೆಗೆ 5 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಜಾರಿಪೇದೆ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಧಾರದ ಮೇಲೆ 1:25 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನದ ಪ್ರಕ್ರಿಯೆಗೆ ತೊಡಗಿಸಲಾಗುವುದು ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಸೇವಕ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ನಿಗದಿತ ಶುಲ್ಕ ಹಾಗೂ ಅರ್ಜಿ ಸಲ್ಲಿಸುವ ವಿಧಾನ:

ಸಾಮಾನ್ಯ ವರ್ಗ,ಪ್ರವರ್ಗ-2A,2B, 3Aಮತ್ತು 3Bಗೆ ಸೇರಿದ ಅಭ್ಯರ್ಥಿಗಳಿಗೆ
ರೂ.200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್ ಸೈಟ್ https://districts.ecourts.gov.in/tumakuru ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online Payment ಅನ್ನು net banking/credit card/ debit card/challan downloadಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಈ ರೀತಿ net banking/credit card/ debit card/challan downloadಸೌಲಭ್ಯದ ಮೂಲಕ ಶುಲ್ಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demand Draft, Postal Order, Money Order ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Mobile summary: District court of tumakuru has invited application for the post of stenos, typist, copy-typist,order enforcer and peon. Interested candidsates can apply before 20 february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+