ಬಾಗಲಕೋಟೆ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ತಜ್ಞ ವೈದ್ಯರು ಹಾಗೂ ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಇಲ್ಲಿ ಪಡೆಯಿರಿ.

ವಿದ್ಯಾರ್ಹತೆ:
ಎಂ.ಡಿ, ಎಂಬಿಬಿಎಸ್, ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಗರಿಷ್ಟ 40 ರಿಂದ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವೇತನ:
ತಜ್ಞ ವೈದ್ಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 46,200/-ರಿಂದ 1,10,000/-ರೂಗಳ ವರೆಗೆ ಮತ್ತು ಆಪ್ತಸಮಾಲೋಚಕ ಹುದ್ದೆಗಳಿಗೆ ಅಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,939/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ಸೆಪ್ಟೆಂಬರ್ ೭,೨೦೨೧ರೊಳಗೆ ತಲುಪಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











